ಬೆಳಗಾವಿ : ಆಹಾರ ಮತ್ತು ಅರಣ್ಯ ಸಚಿವರಾಗಿದ್ದ ಉಮೇಶ್ ಕತ್ತಿಯವರು ( Minister Umesh Katti ) ವಿಧಿವಶರಾದ ಹಿನ್ನಲೆಯಲ್ಲಿ, ರಾಜ್ಯದಲ್ಲ ಮೂರು ದಿನ ಶೋಕಾಚರಣೆಗೆ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
ರಾಜ್ಯದ ವಿವಿಧ ಇಲಾಖೆಯ ‘ಹೊರಗುತ್ತಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ‘ಕನಿಷ್ಠ ವೇತನ’ ಜಾರಿಗೊಳಿಸಿ ಸರ್ಕಾರ ಆದೇಶ
ಈ ಮೂರುದಿನಗಳಲ್ಲಿ ಸರ್ಕಾರದ ಯಾವುದೇ ಕಾರ್ಯಕ್ರಮಗಳು ನಡೆಯುವುದಿಲ್ಲ. ತುರ್ತಾಗಿ ಆಗಬೇಕಾಗಿರುವ ಪ್ರವಾಹ ನಿರ್ವಹಣೆಯ ಎಲ್ಲ ಕಾರ್ಯಗಳು ಮುಂದುವರೆಯಲಿದೆ ಎಂದರು.
ಜನನಾಯಕರಾಗಿದ್ದ ಉಮೇಶ್ ಕತ್ತಿಯವರು ನಮ್ಮನ್ನು ಅಗಲಿದ್ದಾರೆ. ಬೆಳಗಾವಿಯಲ್ಲಿ ನಡೆಯುವ ಅಂತ್ಯಕ್ರಿಯೆಗೆ ಬಹಳ ಭಾರವಾದ ಮನಸ್ಸಿನಿಂದ ಬಂದಿದ್ದೇನೆ. ಸಚಿವ ಉಮೇಶ್ ಕತ್ತಿಯವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಮಾಡಲಾಗುತ್ತದೆ. ಹಿರಾ ಶುಗರ್ ಕಾರ್ಖಾನೆಯಲ್ಲಿ ಆವರಣದಲ್ಲಿ ಸಾರ್ವಜನಿಕ ದರ್ಶನ ಹಾಗೂ ಅಂತಿಮ ಕ್ರಿಯೆಯನ್ನು ಅವರ ತೋಟದಲ್ಲಿ ಮಾಡಲಾಗುತ್ತಿದ್ದು, ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಜನರು ಬಹಳ ದೊಡ್ಡ ಸಂಖ್ಯೆಯಲ್ಲಿ ಬರುತ್ತಿದ್ದು, ಈ ಕಾರ್ಯದಲ್ಲಿ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದರು.
ದೊಡ್ಡಬಳ್ಳಾಪುರದಲ್ಲಿ ಸೆಪ್ಟೆಂಬರ್ 8 ಕ್ಕೆ ನಿಗದಿಯಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11 ರಂದು ಭಾನುವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದರು.