ಮೈಸೂರು : ಜಿಲ್ಲೆಯ ಶ್ರೀರಂಗಪಟ್ಟಣದ ತಾಲೂಕಿನ ಕೆಆರ್ಎಸ್ ಜಲಾಶಯ ಭರ್ತಿಯಾಗಿದ್ದು, ಪತ್ನಿ ಚೆನ್ನಮ್ಮಜತೆಗೆ ಸಿಎಂ ಬಸವರಾಜ ಬೊಮ್ಮಾಯಿ ಬಾಗಿನವನ್ನುಅರ್ಪಿಸಿದರು .
ಕಾರ್ಯಕ್ರಮದಲ್ಲಿ ಜಲ ಸಂಪನ್ಮೂಲ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ, ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರೇಷ್ಮೆ,ಯುವಜನಸಬಲೀಕರಣ ಕ್ರೀಡಾ ಸಚಿವರಾದ ಡಾ.ಕೆ.ಸಿ ನಾರಾಯಣ ಗೌಡ, ಸಹಕಾರ ಇಲಾಖೆ ಸಚಿವರಾದ ಎಸ್.ಟಿ ಸೋಮಶೇಖರ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು ಸಿದ್ದಲಿಂಗಸ್ವಾಮಿ,ಕೃಷ್ಣರಾಜಸಾಗರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ ನರಸಿಂಹ, ಮೈಸೂರು ಮೇಯರ್ ಸುನಂದ ಪಾಲನೇತ್ರ, ಮಂಡ್ಯ ಜಿಲ್ಲಾಧಿಕಾರಿಗಳಾದ ಎಸ್. ಅಶ್ವತಿ, ಮೈಸೂರು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.