ಹೊಸಪೇಟೆ : ಕಮಲಾಪುರ ಗ್ರಾಮದ ಅಂಬೇಡ್ಕರ್ ನಗರದ ದಲಿತ ಸಮುದಾಯಕ್ಕೆ ಸೇರಿದ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಆತಿಥ್ಯ ಸ್ವೀಕಾರಿಸಿದರು, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್ ಅವರೊಂದಿಗೆ ಆಗಮಿಸಿದ ಮುಖ್ಯಮಂತ್ರಿಗಳು ಕಮಲಾಪುರ ಅಂಬೇಡ್ಕರ್ ನಗರದ ದಲಿತ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಗಿನ ಉಪಾಹಾರ ಸವಿದರು.
ಇದೇ ವೇಳೆ ದಲಿತರ ಮನೆಯಲ್ಲಿ ಉಪಹಾರ ಸವಿದ ಸಿಎಂ ಬೊಮ್ಮಾಯಿ, ಕೊಲ್ಲಾರಪ್ಪ ನವರ ಮೊಮ್ಮಗಳು ಅಶ್ವಿನಿ ತಡಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರುವ ವಿಷಯ ತಿಳಿದು ಮೆಚ್ಚುಗೆ ವ್ಯಕ್ತಪಡಿಸಿದರು.