ಕಲಬುರ್ಗಿ : ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಅಂಗವಾಗಿ ಕಲಬುರಗಿ ದ ಸರ್ದಾರ್ ವಲ್ಲಭಾಯ್ ಪಟೇಲ್ ವೃತ್ತದಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರ ಪುತ್ಥಳಿಗೆ ಪುಷ್ಪಾರ್ಚನೆ ಬಂದಿದ್ದರು. ಈ ವೇಳೆ ತಳವಾರ ಸಮುದಾಯದವರು ಸಿಎಂ ಬಸವರಾಜ ಬೊಮ್ಮಾಯಿಗೆ ಕಪ್ಪುಪಟ್ಟಿ ಪ್ರದರ್ಶಿಸಿದ್ದಾರೆ.
ತಳವಾರ ಸಮುದಾಯಕ್ಕೆ ಎಸ್ ಟಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಹೋರಾಟಕ್ಕೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಸಿಎಂಗೆ ಕಪ್ಪುಪಟ್ಟಿ ಪ್ರದರ್ಶಿಸಿದರು. ಈ ವೇಳೆ 25 ಕ್ಕೂ ಅಧಿಕ ಜನರನ್ನು ಪೊಲೀಸರು ಬಂಧಿಸಿದ್ದಾರೆ.