ಬೆಂಗಳೂರು : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, ಹೊಸದಾಗಿ 15,000 ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಹೊಸದಾಗಿ 15,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಕೋರ್ಟ್ ಅನುಮತಿ ಮೇರೆಗೆ ಈಗಾಗಲೇ 15000 ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರ ಅದು ಅನುಷ್ಠಾನವಾಗಲಿದೆ ಎಂದು ಹೇಳುವ ಮೂಲಕ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದಾರೆ. ಇನ್ನೂ, ಶಾಲೆಯ ಮೂಲಭೂತ ಸೌಕರ್ಯ ಹಾಗೂ ಶಿಕ್ಷಕರ ಕೊರತೆ ಸೇರಿ ಶಾಲೆಗಳ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಕಳೆದ ವಾರ ಗೋವಿಂದರಾಜನಗರ ಕ್ಷೇತ್ರದಲ್ಲೂ ಶಾಲೆ ಮತ್ತು ಕಾಲೇಜಿನ ಉದ್ಘಾಟನೆ ಮಾಡಿದ್ದೆ. ಇಂದು ಮಹಾಲಕ್ಷ್ಮಿ ಲೇಔಟ್ ನಲ್ಲಿ ಮಾದರಿ ಶಾಲೆಯನ್ನು ಉದ್ಘಾಟನೆ ಮಾಡಲಾಗಿದೆ. ಬಹುತೇಕವಾಗಿ ಖಾಸಗಿ ವಲಯಕ್ಕಿಂತ ಹೆಚ್ಚು ಆಧುನಿಕವಾದ ಪ್ರಯೋಗಾಲಯಗಳನ್ನು ಹೊಂದಿದೆ. ಸುಮಾರು 6 ಸಾವಿರ ಮಕ್ಕಳು ವಿದ್ಯಾಭ್ಯಾಸ ಮಾಡುವ 4 ಶಾಲೆಗಳನ್ನು ಆಧುನೀಕರಣ ಮಾಡಲಾಗಿದೆ. ಮೂಲಭೂತ ಸೌಕರ್ಯ ಬಹಳ ಮುಖ್ಯ. ಈಗಾಗಲೇ 15 ಸಾವಿರ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಅನುಷ್ಠಾನ ಮಾಡಲಾಗುವುದು. ಬರುವ ವರ್ಷದಲ್ಲಿ ಶಿಕ್ಷಕರ ಕೊರತೆ ನೀಗಿಸುವ ಸಲುವಾಗಿ ಇನ್ನೂ 15 ಸಾವಿರ ಶಿಕ್ಷಕರನ್ನು ನೇಮಿಸಲಾಗುವುದು. ಸಚಿವ ಕೆ. ಗೋಪಾಯ್ಯನವರು ತಮ್ಮ ಟ್ರಸ್ಟ್ ನಿಂದ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಿಸಿ, ವೇತನವನ್ನೂ ನೀಡುತ್ತಿದ್ದಾರೆ. ಹಲವಾರು ಸಂಗ ಸಂಸ್ಥೆಗಳ ಸಹಕಾರವನ್ನೂ ಪಡೆದುಕೊಳ್ಳಬೇಕು. ಸರ್ಕಾರವೂ ಇದಕ್ಕೆ ಸಹಾಯ ಮಾಡುತ್ತದೆ. ಒಂದು ರೀತಿಯಲ್ಲಿ ನಗರದ ಕೊಳಗೇರಿಗಳಲ್ಲಿರುವ, ಶಿಕ್ಷಣದಿಂದ ವಂಚಿತರಾದವರಿಗೆ ಇದರಿಂದ ಒಳ್ಳೆಯ ಅವಕಾಶ ದೊರೆತಿದೆ ಎಂದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.