ಹಾವೇರಿ : ಶಿಗ್ಗಾಂವಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಇಂದು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಅವರು ಇಲ್ಲಿ ಜನ ಸಂಖ್ಯೆ ಹೆಚ್ಚಿರುವ ಕಾರಣ ಸಾರ್ವಜನಿಕ ಆಸ್ಪತ್ರೆಯಲ್ಲಿ 250 ಹಾಸಿಗಗಳವರೆಗೂ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇದರಲ್ಲಿ ಅತಿ ಹೆಚ್ಚು ಐಸಿಯು, ಎನ್ಐಸಿಯು ಬೆಡ್ಗಳು ಮತ್ತು ಆಪರೇಷನ್ ಥಿಯೇಟರ್, ಡಯಾಲಿಸಿಸ್ ಯುನಿಟ್ ವ್ಯವಸ್ಥೆ ಇರಲಿದೆ ಎಂದರು.
ಹಾಗೂ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕಣ್ಣಿನ ಆಪರೇಷನ್ ಮಾಡಿಸಲಾಗುತ್ತದೆ. ಅಲ್ಲದೇ ಉಚಿತ ಕನ್ನಡಕವನ್ನು ಕೂಡ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಇಂದು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಅವರು, 96 ಕೋಟಿ ವೆಚ್ಚದ ಆಸ್ಪತ್ರೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಉತ್ತಮ ಚಿಕಿತ್ಸೆ ಸಿಗುವ ವಿಶ್ವಾಸವಿದೆ ಎಂದರು.
‘ಕರ್ನಾಟಕ ಯಾರಪ್ಪನ ಮನೆ ಸ್ವತ್ತೂ ಅಲ್ಲ’ : ಕಾಂಗ್ರೆಸ್ ವಿರುದ್ಧ ಸಿ.ಟಿ ರವಿ ವಾಗ್ಧಾಳಿ |C.T Ravi
‘ಭಾರತೀಯ ಕ್ರಿಕೆಟ್’ ನಲ್ಲೂ ಮೀಸಲಾತಿ ಜಾರಿಯಾಗಲಿ : ನಟ ಚೇತನ್ ಆಗ್ರಹ |Actor Chethan