ಬೆಂಗಳೂರು : ರಾಜ್ಯದಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ವಿಶೇಷ ಯೋಜನೆ ರೂಪಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ ಉಚಿತ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ನಂತರ ಮಾತನಾಡಿದರು. ಮಕ್ಕಳಿಗೆ ಪೌಷ್ಟಿಕಾಂಶ ಕೊರತೆಯಾದಾಗ ಮಾತ್ರ ಕಣ್ಣಿನ ರೋಗ, ಕುರುಡುತ ಇಂತಹ ರೋಗಗಳು ಬರುತ್ತದೆ. ಆದ್ದರಿಂದ ರಾಜ್ಯದಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ವಿಶೇಷ ಯೋಜನೆ ರೂಪಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಸರ್ಕಾರದಿಂದ ಅಪೌಷ್ಟಿಕತೆ ನಿವಾರಣೆಗೆ ವಿಶೇಷ ಆಹಾರ ಹಾಗೂ ಔಷಧ ನೀಡುವ ಯೋಜನೆ ರೂಪಿಸಿದ್ದೇವೆ. ಆರು ಜಿಲ್ಲೆಗಳಲ್ಲಿ ಅಪೌಷ್ಟಿಕತೆ ಹೆಚ್ಚಿದ್ದು, ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ವಿಶೇಷ ಯೋಜನೆ ರೂಪಿಸಲಾಗಿದೆ ಎಂದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ಕಣ್ಣಿನ ಆಸ್ಪತ್ರೆ ತೆರೆಯವುದಾಗಿ ಡಾ. ಭುಜಂಗ ಶೆಟ್ಟಿ ಹೇಳಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ ಉಚಿತ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ನಂತರ ಮಾತನಾಡಿದರು. :ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ಕಣ್ಣಿನ ಆಸ್ಪತ್ರೆ ತೆರೆಯವುದಾಗಿ ಡಾ. ಭುಜಂಗ ಶೆಟ್ಟಿ ಹೇಳಿದ್ದಾರೆ, ಅವರ ಯೋಜನೆ ಬೇಗ ಈಡೇರಲಿ ಎಂದು ಸಿಎಂ ಹೇಳಿದರು. ಡಾ. ಭುಜಂಗ ಶೆಟ್ಟಿಯವರು ತಮ್ಮ ವೃತ್ತಿಯಲ್ಲಿ ಯಶಸ್ವಿಯಾಗಿದ್ದು, ಅವರಿಗೆ ನಾನು ಎಂಬ ಭಾವನೆ ಇಲ್ಲ ಎಂದು ಹೇಳಿದರು.
ಬಡವರಿಗೆ ಉಚಿತ ಕಣ್ಣಿನ ಚಿಕಿತ್ಸೆ
ಇನ್ನೂ, ಬಡವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಯೋಜನೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ತುಮಕೂರಿನ ಕುಣಿಗಲ್ ನಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದರು.ನಮ್ಮ ಸರ್ಕಾರ ಕಣ್ಣಿನ ಚಿಕಿತ್ಸೆಗೆ ಯೋಜನೆ ರೂಪಿಸಿದೆ, ಈ ಯೋಜನೆ ಜನವರಿಯಲ್ಲಿ ಚಾಲನೆಗೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಈ ಯೋಜನೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಿದೆ ಎಂದು ಬೊಮ್ಮಾಯಿ ಹೇಳಿದರು. ಜನಸಂಕಲ್ಪ ಯಾತ್ರೆ ನಮ್ಮ ನಿರೀಕ್ಷೆ ಮೀರಿ ಮುನ್ನುಗ್ಗುತ್ತಿದೆ, ಎಲ್ಲೆಡೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದರು.
ಕಾಂಗ್ರೆಸ್ ವಿರುದ್ಧ ಗುಡುಗಿದ ಬೊಮ್ಮಾಯಿ ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಆಗಿದೆ.ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ನ್ನು ಬಿಜೆಪಿ ಕ್ಲೀನ್ ಸ್ವಿಪ್ ಮಾಡಲಿದೆ ಎಂದರು.
BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಆರೋಪ : ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ, ಜೈಲೇ ಗತಿ
BIGG NEWS : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ‘ಕಣ್ಣಿನ ಆಸ್ಪತ್ರೆ’ : ಸಿಎಂ ಬೊಮ್ಮಾಯಿ ಘೋಷಣೆ