ಮೈಸೂರು : ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದಾರೆ.
ಸತತ 12 ವರ್ಷಗಳ ಹೋರಾಟದ ಫಲವಾಗಿ ರಾಜ್ಯ ಸರ್ಕಾರವು ಹೆಚ್.ಡಿ.ಕೋಟೆ ರಸ್ತೆಯ ಉದ್ಧೂರು ಗೇಟ್ ಬಳಿಯ ಹಾಲಾಳು ಗ್ರಾಮದಲ್ಲಿ ಸ್ಮಾರಕ ನಿರ್ಮಿಸಿದ್ದು, ಇಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದಾರೆ. ವಿಷ್ಣುವರ್ಧನ್ ಸ್ಮಾರಕ ಪ್ರವಾಸಿ ತಾಣವಾಗಬೇಕು ಎಂದು ಸಿಎಂ ಹೇಳಿದ್ದಾರೆ.
ಮೈಸೂರಿನ ಹೆಚ್.ಡಿ ಕೋಟೆ ಹಾಲ್ಲಾಳು ಗ್ರಾಮದಲ್ಲಿ 5 ಎಕರೆ ಜಾಗದಲ್ಲಿ ಸ್ಮಾರಕವನ್ನು ನಿರ್ಮಿಸಲಾಗಿದೆ.ಇದರಲ್ಲಿ ವಿಷ್ಣುವರ್ಧನ್ ಅವರಿಗೆ ಸಂಬಂಧಿಸಿದ ಗ್ಯಾಲರಿ, ಆಡಿಟೋರಿಯಂ, ವಿಷ್ಣು ಪುತ್ಥಳಿ, ಕ್ಲಾಸ್ ರೂಮ್, ಕ್ಯಾಂಟೀನ್ ಏರಿಯಾ, ಸ್ಮಾರಕದಲ್ಲಿ ಒಳಗೊಂಡಿದೆ.
ವಿಷ್ಣು ದಾದಾ ಅಗಲಿದ 13 ವರ್ಷಗಳ ಬಳಿಕ ಸ್ಮಾರಕ ನಿರ್ಮಾಣವಾಗಿದೆ. 2020 ರ ಸೆ.15 ರಂದು ಸ್ಮಾರಕಕ್ಕೆ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ಮಾರಕಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು. ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಆಗಲೇ 11 ಕೋಟಿ ರೂಪಾಯಿ ಮಂಜೂರು ಮಾಡಲಾಗಿತ್ತು. ಸುಮಾರು 5 ಎಕರೆ ಜಾಗದಲ್ಲಿ 11 ಕೋಟಿ ರೂಪಾಯಿ ವೆಚ್ಚದಲ್ಲಿ ಸಿಂಹ ಸ್ಮಾರಕ ನಿರ್ಮಾಣವಾಗಿದೆ.
ಶಿವಮೊಗ್ಗ : ನಾಳೆ ‘ಸರ್ವೋದಯ ದಿನ’ ಹಿನ್ನೆಲೆ ‘ಪ್ರಾಣಿವಧೆ, ಮಾಂಸ ಮಾರಾಟ’ ನಿಷೇಧ
ʻಮಗಳ ಮದುವೆಗೆ ಹಣ ಬೇಕು, ಸಾಲ ಪಡೆದ ಹಣ ವಾಪಸ್ ಕೊಡಿʼ: ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಉದ್ಯಮಿ