ಮೈಸೂರು: ಬೆಂಗಳೂರಿನ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ನಡೆದಿರುವಂತ ಅಕ್ರಮದ ರೂವಾರಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಅವರೇ ಈ ಪ್ರಕರಣದ ಕಿಂಗ್ ಪಿನ್ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಹೇಳಿದ್ದಾರೆ.
ಸರ್ ರೈತರ ಸಾಲಮನ್ನಾ ಮಾಡುವಿರಾ.? ಏಯ್ ನೆಕ್ಸ್ಟ್ ಪ್ರಶ್ನೆ ಕೇಳಪ್ಪ: ಸಿಎಂ ಬೊಮ್ಮಾಯಿ ಉತ್ತರ
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಚಿಲುಮೆ ಸಂಸ್ಥೆಗೆ ನಮ್ಮ ಆಡಳಿತದಲ್ಲಿಯೇ ಮತದಾರರ ಪಟ್ಟಿ ಬಗ್ಗೆ ಅನುಮತಿ ನೀಡಲಾಗಿತ್ತು ಎಂದು ಬಿಜೆಪಿಯವರು ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ನಮ್ಮ ಆಡಳಿತದಲ್ಲಿ ನೀಡಿದ್ದರೇ ಆಗ ಯಾಕೆ ಮಾತನಾಡಲಿಲ್ಲ. ನಿಮಗೇನು ಬಾಯಿ ಇರಲಿಲ್ಲವಾ ಎಂದು ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ನಡೆದಿರುವಂತ ಮತದಾರರ ಪಟ್ಟಿಯ ಪರಿಷ್ಕರಣೆ ಅಕ್ರಮದ ಹಿಂದಿನ ರೂಪಾರಿಯೇ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಆಗಿದ್ದಾರೆ. ಇದೊಂದು ಬಹು ದೊಡ್ಡ ಮಟ್ಟದ ವಂಚನೆಯಾಗಿದೆ. ಈ ಬಗ್ಗೆ ಉಚ್ಛ ನ್ಯಾಯಾಲಯ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ಸಂವಿಧಾನದ ಪ್ರತಿ ಹಂಚಿಕೆ – ಸಿಎಂ ಬೊಮ್ಮಾಯಿ
ರಾಜ್ಯ ಸರ್ಕಾರದ ಜನತೆಯನ್ನು ಗೊಂದಲಕ್ಕೆ ದೂಡುವ ಸಲುವಾಗಿ 2017ರಲ್ಲಿಯೇ ಈ ಅಕ್ರಮ ನಡೆದಿತ್ತು ಎಂದು ಹೇಳುತ್ತಿದೆ. ನಾವು ಹಾಗೆ ಮಾಡಿದ್ದರೇ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲುತ್ತಾ ಇರಲಿಲ್ಲ ಎಂದರು.