ಬಳ್ಳಾರಿ : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳ್ಳಾರಿ ಜಿಲ್ಲೆಯಲ್ಲಿನ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಮತ್ತು ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಇಂದು ಸಿಎಂ 400 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಬಳ್ಳಾರಿ ಜಿಲ್ಲೆಯ ಜನರಿಗೆ ಈ ಆಸ್ಪತ್ರೆಯಿಂದ ಅನುಕೂಲ ಆಗಲಿದೆ. ರಾಜ್ಯದಲ್ಲಿ ಇದೇ ಮೊದಲು ನಾಲ್ಕು ಬೆಡ್, ತಾಯಿ ಮಕ್ಕಳ ಅಸ್ಪತ್ರೆ ಆರಂಭವಾಗಿದೆ ಎಂದು ಹೇಳಿದರು. ತಾಯಿ ಹಾಗೂ ಮಕ್ಕಳಲ್ಲಿ ಪೌಷ್ಟಿಕ ಆಹಾರದ ಕೊರತೆ ಕಾಣುತ್ತಿದ್ದು, ವಿಶೇಷ ಅನುದಾನವನ್ನು ನೀಡುವುದರ ಮೂಲಕ ತಾಯಿ ಹಾಗೂ ಮಕ್ಕಳ ಆರೋಗ್ಯಕ್ಕೆ ನಾವು ಹೆಚ್ಚು ಒತ್ತು ನೀಡಿದ್ದೇವೆ ಎಂದಿದ್ದಾರೆ.
ಬಳ್ಳಾರಿ ಹೊಸಪೇಟೆ ರಸ್ತೆ ಕಾಮಗಾರಿ ವಿಚಾರವಾಗಿ ನಾನು ನಿತಿನ್ ಗಡ್ಕರಿಯವರ ಜೊತೆ ಮಾತನಾಡಿದ್ದೇನೆ. ಮರು ಟೆಂಡರ್ ಮಾಡಲು ಮನವಿ ಮಾಡಿದ್ದೇನೆ. ಈಗಾಗಲೇ ಪ್ರಕ್ರಿಯೆ ಆರಂಭವಾಗಿದೆ ಎಂದರು.
ಸಿದ್ದರಾಮಯ್ಯನವರಿಗೆ ಜನರೇ ತಕ್ಕ ಉತ್ತರ ಕೊಡುತ್ತಾರೆ – ಸಿಎಂ ಬೊಮ್ಮಾಯಿ
BREAKING NEWS : ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ |S.M Krishna