ಹುಬ್ಬಳ್ಳಿ : ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಚರ್ಚಿಸುವುದಕ್ಕಾಗಿ ಇದೀಗ ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ವಿಶೇಷ ವಿಮಾನದ ಮೂಲಕ ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಿದ್ದು. ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಸೇರಿ ಹಲವು ವಿಚಾರಗಳ ಜೊತೆ ಸಿಎಂ ಬೊಮ್ಮಾಯಿ ದೆಹಲಿಯಲ್ಲಿ ವರಿಷ್ಟರ ಜೊತೆ ಚರ್ಚಿಸಲಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ದೆಹಲಿಯಲ್ಲಿ ಗೃಹ ಸಚಿವ ಅಮಿತಾ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದಾರೆ. ಅಲ್ಲಿಂದ ನೇರವಾಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಉಭಯ ರಾಜ್ಯಗಳ ನಡುವಿನ ಗಡಿಯಲ್ಲಿನ ವಾಸ್ತವ ಪರಿಸ್ಥಿತಿ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
‘ಬಿಜೆಪಿಯ ರೌಡಿ ಮೋರ್ಚಾ ತಯಾರಾಗುತ್ತಿದ್ದಂತೆ ರೌಡಿಗಳಿಗೆ ಧೈರ್ಯ ಬಂದಿದೆ’ : ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ