ಬೆಳಗಾವಿ: ಬೆಳಗಾವಿ ಸುವರ್ಣಸವಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ 2022-23ರನೇ ಸಾಲಿನ ಪೂರಕ ಬಜೆಟ್ ಮಂಡಿಸಿದ್ದಾರೆ.
BIGG NEWS: ಕೇಸರಿಮಯವಾದ ಮಂಡ್ಯ; ಬಿಜೆಪಿ ಫ್ಲೆಕ್ಸ್ನಲ್ಲಿ ರಾರಾಜಿಸುತ್ತಿದೆ ಸುಮಲತಾ ಫೋಟೋ
8001.13 ಕೋಟಿ ರೂ.ಗಳ ಪೂರಕ ಅಂದಾಜು ಮಂಡಿಸಿದ್ದಾರೆ. ಇನ್ನು, ರಾಜ್ಯ ಅಸೆಂಬ್ಲಿ ಚುನಾವಣೆ ಎದುರಿಗೆ ಇದ್ದು ಸಿಎಂ ಬಸವರಾಜ ಬೊಮ್ಮಾಯಿ ಫೆಬ್ರವರಿಯಲ್ಲಿ ತಾತ್ಕಾಲಿಕ ಬಜೆಟ್ ಮಂಡಿಸಲಿದ್ದಾರೆ.ಡಿಸಾಸ್ಟರ್ ರೆಸ್ಪಾನ್ಸ್ ಫಂಡ್ಗೆ 1,396 ಕೋಟಿ ರೂ. ಮೀಸಲು, ಮನ್ರೇಗಾ ಯೋಜನೆಗೆ 750 ಕೋಟಿ ರೂಪಾಯಿ ಮೀಸಲು, ಇಂಧನ ಸೆಕ್ಟರ್ನಲ್ಲಿ ಈಕ್ವಿಟಿ ಖರೀದಿಗೆ 500 ಕೋಟಿ ರೂ, ಜನರಲ್ ಅಸೆಂಬ್ಲಿ ಚುನಾವಣೆಗೆ 300 ಕೋಟಿ ರೂಪಾಯಿ, ರಾಜೀವ್ ಗಾಂಧಿ ಹೌಸಿಂಗ್ ಸೊಸೈಟಿ ಸ್ಕೀಂಗೆ 256 ಕೋಟಿ ರೂ, ರೈಲ್ವೆ ಯೋಜನೆಗೆ 250 ಕೋಟಿ, ನೀರಾವರಿ ಯೋಜನೆಗೆ 200 ಕೋಟಿ, ಐದು ಮೆಗಾ ಹಾಸ್ಟೆಲ್ಗಳ ನಿರ್ಮಾಣಕ್ಕೆ 200 ಕೋಟಿ ರೂ ಹಾಗೂ ಬಿಬಿಎಂಪಿಗೆ ಎರಡು ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ.