ಬೆಂಗಳೂರು: ಈಗಾಗಲೇ ವಿವಿಧ ಇಲಾಖೆಯ ವರ್ಗಾವಣೆ ಕಡತಗಳನ್ನು ಮುಖ್ಯಮಂತ್ರಿಗಳ ಕಚೇರಿಗೆ ಸಲ್ಲಿಸದಂತೆ ಖಡಕ್ ಸೂಚನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದರು. ಈ ಬೆನ್ನಲ್ಲೇ ಇಂದು ಮತ್ತೆ ಸರ್ಕಾರಿ ನೌಕರರ ವರ್ಗಾವಣೆಗೆ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಅಲ್ಲದೇ ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಸಚಿವರ ಹಂತದಲ್ಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ.

ವಿಕಲಚೇತನರಿಗೆ ಮಹತ್ವದ ಮಾಹಿತಿ: ಬಿಎಂಟಿಸಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ, ಹಳೆಯ ಪಾಸ್ ಅವಧಿಯೂ ವಿಸ್ತರಣೆ

ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಲೋಕೋಪಯೋಗಿ, ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಟಿಪ್ಪಣಿ ಹೊರಡಿಸಿದ್ದಾರೆ.

Covid19: ನಿಮಗೆ ಗೊತ್ತಾ ಈಗ ಹೆಚ್ಚಿನ ಆತಂಕ ಸೃಷ್ಠಿಸಿರುವ ಬಿಎಫ್.7 ಒಮಿಕ್ರಾನ್ ಉಪತಳಿ 2 ವರ್ಷಗಳ ಹಿಂದೆಯೇ ಪತ್ತೆ.!

ಸಿಎಂ ಹೊರಡಿಸಿರುವಂತ ಟಿಪ್ಪಣಿಯಲ್ಲಿ ಈಗಾಗಲೇ ವರ್ಗಾವಣೆ ಅವಧಿ ಮುಕ್ತಾಯಗೊಂಡಿರುವುದರಿಂದ ಹಾಗೂ ಸನಿಹದಲ್ಲಿಯೇ ಅಯವ್ಯಯ ಅಧಿವೇಶನ ಹಾಗೂ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಗಳು ಇರುವುದರಿಂದ, ಈ ಹಂತದಲ್ಲಿ ಯಾವುದೇ ವರ್ಗಾವಣೆ, ನಿಯೋಜನೆ ಪ್ರಸ್ತಾವನೆಗಳನ್ನು ಸಲ್ಲಿಸದೇ ಇರುವಂತೆ ಸೂಚಿಸಿದ್ದಾರೆ.

ಜೆಡಿಎಸ್ ಅಧಿಕಾರಕ್ಕೆ ಬಂದರೇ 100 ದಿನದಲ್ಲಿ ಎನ್ ಪಿಎಸ್ ರದ್ದು – ಸಿ.ಎಂ ಇಬ್ರಾಹಿಂ | JDS Party

ಇನ್ನೂ ಸ್ಥಳ ನಿರೀಕ್ಷೆಯಲ್ಲಿರುವವರಿಗೆ ಖಾಲಿ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಪ್ರಸ್ತಾವನೆಗಳನ್ನು ಸಚಿವರ ಹಂತದಲ್ಲಿಯೇ ಕೈಗೊಳ್ಳಲು ಸಹ ಸೂಚನೆ ನೀಡಿದ್ದಾರೆ.

Share.
Exit mobile version