ಬೆಂಗಳೂರು : ಗಡಿ ವಿಷಯದಲ್ಲಿ ಯಾರಾದರೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ನಾನು ಸುಮ್ಮನಿರೋದಿಲ್ಲ, ತಕ್ಕ ಉತ್ತರ ನೀಡಲಿದ್ದೇವೆ, ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಮರಾಠ ಮಹಾಸಂಘ ಪುಂಡಾಟ ಮೆರೆದಿದ್ದು, ಕರ್ನಾಟಕ ಸಾರಿಗೆ ಬಸ್ ಗಳಿಗೆ ಕಪ್ಪು ಮಸಿ ಬಳಿದು ಕ್ಯಾತೆ ತೆಗೆದಿದ್ದು, ಇದಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕಾನೂನು ಎಲ್ಲರಿಗೂ ಒಂದೇ . ಗಲಾಟೆ ಮಾಡಿದವರ ವಿರುದ್ಧ ಮಹಾರಾಷ್ಟ್ರ ಸಿಎಂ ಕೂಡಲೇ ಕ್ರಮ ಕೈಗೊಳ್ಳಬೇಕು. ನಮ್ಮ ರಾಜ್ಯದ ಗಡಿ ಜನರನ್ನು ಉಳಿಸಿಕೊಳ್ಳುತ್ತೇವೆ. ಪ್ರಕರಣ ಸುಪ್ರೀಂಕೋರ್ಟ್ ಇತ್ಯರ್ಥ ಮಾಡಲಿದೆ ಎಂದರು. ಬಸ್ ಗಳ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ಎಸೆದು ಮಸಿ ಬಳಿದಿರುವ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಇಂಥ ಪುಂಡಾಟಿಕೆಯನ್ನು ನಾವು ಸಹಿಸುವುದಿಲ್ಲ ಎಂದು ಗುಡುಗಿದರು.
ನಾವು ಕಾನೂನು ಪಾಲಿಸುವವರಾಗಿದ್ದು, ನಮ್ಮ ಹಕ್ಕುಗಳ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದೇವೆ. ಮಹಾರಾಷ್ಟ್ರ 2004ರಲ್ಲಿ ಪ್ರಕರಣ ದಾಖಲಿಸಿತ್ತು. ನಾವು ಕೋರ್ಟ್ ನಲ್ಲಿ ಹೋರಾಡುತ್ತಿದ್ದೇವೆ ಎಂದರು.ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ಮರಾಠ ಮಹಾಸಂಘವು ನವೆಂಬರ್ 25 ರಂದು ಪುಣೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ವಿರುದ್ಧವಾಗಿ ಪ್ರತಿಭಟನೆ ನಡೆದಿದೆ, ಪ್ರತಿಭಟನೆಯ ಸಂಕೇತವಾಗಿ, ಮಹಾಸಂಘ ಪುಂಡರು ಪುಣೆಯಲ್ಲಿ ರಾಜ್ಯ ಮತ್ತು ಕರ್ನಾಟಕದ ನಡುವೆ ಸಂಚರಿಸುವ ಬಸ್ಸುಗಳ ಮೇಲೆ ‘ಸಾರ್ವಜನಿಕ ಪ್ರತಿಭಟನೆ’, ‘ಜೈ ಮಹಾರಾಷ್ಟ್ರ’ ಎಂದು ಬರೆದರು.
ನಮ್ಮ ಗಡಿ ಹಾಗೂ ಜನರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ರಾಜ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಮಹಾರಾಷ್ಟ್ರ ಕ್ರಮ ವಹಿಸಬೇಕು. ಭಾರತ ರಾಜ್ಯಗಳ ಒಕ್ಕೂಟ. ಪ್ರತಿ ರಾಜ್ಯಕ್ಕೂ ತನ್ನದೇ ಆದ ಹಕ್ಕುಗಳಿವೆ. ರಾಜ್ಯಗಳನ್ನು ರಾಜ್ಯ ಮರುವಿಂಗಡನಾ ಕಾಯ್ದೆಯಡಿ ರಚಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಆಯಾ ರಾಜ್ಯಗಳ ಕರ್ತವ್ಯವಾಗಿದ್ದು, ರಾಜ್ಯಗಳ ನಡುವೆ ಶಾಂತಿ ಕಾಯ್ದುಕೊಳ್ಳಬೇಕಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣವೇ ಕ್ರಮಕೈಗೊಂಡು ರಾಜ್ಯಗಳ ನಡುವಿನ ಅಂತರವನ್ನು ಕಡಿಮೆಮಾಡಬೇಕು. ನಾವು ಕಾನೂನು ಪಾಲಿಸುವವ ರಾಗಿದ್ದು, ನಮ್ಮ ಹಕ್ಕುಗಳ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದೇವೆ. ಮಹಾರಾಷ್ಟ್ರ 2004 ರಲ್ಲಿ ಪ್ರಕರಣ ದಾಖಲಿಸಿತ್ತು. ನಾವು ನ್ಯಾಯಾಲಯದಲ್ಲಿ ಹೋರಾಡುತ್ತಿದ್ದೇವೆ ಎಂದರು.
ಕಾನೂನು ಹೋರಾಟಕ್ಕೆ ಆದ್ಯತೆ
ನಮ್ಮ ಮೊದಲ ಆದ್ಯತೆ ಕಾನೂನಾತ್ಮಕ ಹೋರಾಟ ಮಾಡುವುದಾಗಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವಿದ್ದಾಗ ಅದರ ತೀರ್ಪಿಗಾಗಿ ಕಾಯಬೇಕು. ಪ್ರಕರಣವು ಅದರ ಅರ್ಜಿಯ ಅರ್ಹತೆಯ ಮೇಲೆ ನಿಂತಿಲ್ಲ, ಬದಲಾಗಿ ಮೆಂಟೇನಬಿಲಿಟಿ ಆಧಾರದ ಮೇಲೆ ನಿಂತಿದೆ. ಕಲಂ 3 ಕೂಡ ಬಹಳ ಸ್ಪಷ್ಟವಾಗಿದೆ. ಸರ್ವೋಚ್ಚ ನ್ಯಾಯಾಲಯವು ಈ ಬಗ್ಗೆ ಒಂದು ನಿರ್ಣಯಕ್ಕೆ ಬರಬೇಕಿದೆ ಎಂದರು. ಮುಂದಿನ ವಾರದಲ್ಲಿ ಸರ್ವ ಪಕ್ಷ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.
BIGG NEWS : ಶೀಘ್ರವೇ ಕರ್ನಾಟಕದಲ್ಲೂ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ನಿರ್ಧಾರ : ಸಿಎಂ ಬಸವರಾಜ ಬೊಮ್ಮಾಯಿ
BIGG NEWS : ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮತ್ತೊಂದು ಗುಡ್ ನ್ಯೂಸ್ : 1,915 ಕೋಟಿ ರೂ. `GST’ ಹಣ ಬಿಡುಗಡೆ