ಬೆಂಗಳೂರು : ಗಡಿ ವಿಷಯದಲ್ಲಿ ಯಾರಾದರೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ನಾನು ಸುಮ್ಮನಿರೋದಿಲ್ಲ, ತಕ್ಕ ಉತ್ತರ ನೀಡಲಿದ್ದೇವೆ, ಸರ್ಕಾರ ಸೂಕ್ತ ಕ್ರಮ ಜರುಗಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಮರಾಠ ಮಹಾಸಂಘ ಪುಂಡಾಟ ಮೆರೆದಿದ್ದು, ಕರ್ನಾಟಕ ಸಾರಿಗೆ ಬಸ್ ಗಳಿಗೆ ಕಪ್ಪು ಮಸಿ ಬಳಿದು ಕ್ಯಾತೆ ತೆಗೆದಿದ್ದು, ಇದಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕಾನೂನು ಎಲ್ಲರಿಗೂ ಒಂದೇ . ಗಲಾಟೆ ಮಾಡಿದವರ ವಿರುದ್ಧ ಮಹಾರಾಷ್ಟ್ರ ಸಿಎಂ ಕೂಡಲೇ ಕ್ರಮ ಕೈಗೊಳ್ಳಬೇಕು. ನಮ್ಮ ರಾಜ್ಯದ ಗಡಿ ಜನರನ್ನು ಉಳಿಸಿಕೊಳ್ಳುತ್ತೇವೆ. ಪ್ರಕರಣ ಸುಪ್ರೀಂಕೋರ್ಟ್ ಇತ್ಯರ್ಥ ಮಾಡಲಿದೆ ಎಂದರು. ಬಸ್ ಗಳ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ಎಸೆದು ಮಸಿ ಬಳಿದಿರುವ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಇಂಥ ಪುಂಡಾಟಿಕೆಯನ್ನು ನಾವು ಸಹಿಸುವುದಿಲ್ಲ ಎಂದು ಗುಡುಗಿದರು.

ನಾವು ಕಾನೂನು ಪಾಲಿಸುವವರಾಗಿದ್ದು, ನಮ್ಮ ಹಕ್ಕುಗಳ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದೇವೆ. ಮಹಾರಾಷ್ಟ್ರ 2004ರಲ್ಲಿ ಪ್ರಕರಣ ದಾಖಲಿಸಿತ್ತು. ನಾವು ಕೋರ್ಟ್ ನಲ್ಲಿ ಹೋರಾಡುತ್ತಿದ್ದೇವೆ ಎಂದರು.ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ಮರಾಠ ಮಹಾಸಂಘವು ನವೆಂಬರ್ 25 ರಂದು ಪುಣೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ವಿರುದ್ಧವಾಗಿ ಪ್ರತಿಭಟನೆ ನಡೆದಿದೆ, ಪ್ರತಿಭಟನೆಯ ಸಂಕೇತವಾಗಿ, ಮಹಾಸಂಘ ಪುಂಡರು ಪುಣೆಯಲ್ಲಿ ರಾಜ್ಯ ಮತ್ತು ಕರ್ನಾಟಕದ ನಡುವೆ ಸಂಚರಿಸುವ ಬಸ್ಸುಗಳ ಮೇಲೆ ‘ಸಾರ್ವಜನಿಕ ಪ್ರತಿಭಟನೆ’, ‘ಜೈ ಮಹಾರಾಷ್ಟ್ರ’ ಎಂದು ಬರೆದರು.

ಮಂಗಳೂರು ಬಾಂಬ್ ಸ್ಪೋಟ ; ಆಟೋ ಚಾಲಕನಿಗೆ ಸರ್ಕಾರದಿಂದ ಸೂಕ್ತ ಪರಿಹಾರ : ಸಚಿವ ಸುನೀಲ್ ಕುಮಾರ್

BREAKING NEWS: ಮತ್ತೊಬ್ಬ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಕೂಳೂರು ಬಸವನಗೌಡ ವಿಧಿವಶ

Share.
Exit mobile version