ಬೆಂಗಳೂರು : ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ( Renukacharya) ಸಹೋದರನ ಪುತ್ರ ‘ಚಂದ್ರಶೇಖರ್ (24) ಮೃತದೇಹ ಇಂದು ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇನ್ನೂ, ಘಟನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಕುಟುಂಬಸ್ಥರು ನೀಡುವ ದೂರಿನಂತೆ ತನಿಖೆ ನಡೆಯುತ್ತದೆ, ಶಾಸಕ ರೇಣುಕಾಚಾರ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ತನಿಖೆ ಬಗ್ಗೆ ಚಂದ್ರಶೇಖರ್ ತಂದೆ ಅಭಿಪ್ರಾಯ ಪಡೆಯುತ್ತೇವೆ , ಕುಟುಂಬಸ್ಥರು ನೀಡುವ ದೂರಿನಂತೆ ತನಿಖೆ ನಡೆಯುತ್ತದೆ ಎಂದು ಹೇಳಿದ್ದಾರೆ.
ಈಗಾಗಲೇ ಮೃತದೇಹವನ್ನು ಆಂಬುಲೆನ್ಸ್ ಮೂಲಕ ದಾವಣಗೆರೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗುತ್ತಿದ್ದು, ಇಂದು ದಾವಣಗೆರೆ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಚಂದ್ರಶೇಖರ್ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಚಂದ್ರಶೇಖರ್ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದೆ.
ಘಟನೆ ಸಂಬಂಧ ಈಗಾಗಲೇ ದುರಂತ ನಡೆದ ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ( ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು) ಧಾವಿಸಿ ಪರಿಶೀಲನೆ ನಡೆಸಿದೆ. ಎಫ್ ಎಸ್ ಎಲ್ ವರದಿಯಿಂದ ಸಾವಿನ ಸತ್ಯಾನುಸತ್ಯತೆ ಬಯಲಾಗಲಿದೆ.