ನವದೆಹಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ( Union Defence Minister Rajnath Singh ) ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿ ಜಿಲ್ಲೆ ತುಕಮಟ್ಟಿ ಗ್ರಾಮದ 732.24 ಎಕರೆ ಪ್ರದೇಶವು ರಕ್ಷಣಾ ಪ್ರಾಧಿಕಾರದ ವಶದಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿಯ ದೃಷ್ಟಿಯಿಂದ ಈ ಭೂ ಪ್ರದೇಶವನ್ನು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲು ರಕ್ಷಣಾ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ರಕ್ಷಣಾ ಸಚಿವರನ್ನು ಕೋರಿದರು.
ಶಿವಮೊಗ್ಗ: ಡಿ.7ರವರೆಗೆ ಕುವೆಂಪು ವಿವಿ ಸ್ನಾತಕೋತ್ತರ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಜಲಸಂಪನ್ಮೂಲ ಮತ್ತು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು