ಬೆಂಗಳೂರು: ಮುಂದಿನ ವಾರಾಂತ್ಯದಲ್ಲಿ ದೆಹಲಿಗೆ ಭೇಟಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ. ಸರ್ಕಾರ ಮತ್ತು ಪಕ್ಷಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ.
BIGG NEWS: ಟಿಪ್ಪು ಎಕ್ಸ್ ಪ್ರೆಸ್ ರೈಲು ಹೆಸರು ಬೇಕಂತಲೇ ಬದಲಿಸಿದ್ದೇನೆ; ಪ್ರತಾಪ್ ಸಿಂಹ ಸಮರ್ಥನೆ
ಬಹಳ ತಿಂಗಳ ಬಳಿಕ ದೆಹಲಿಗೆ ಸಿಎಂ ಭೇಟಿ ನೀಡಲಿದ್ದಾರೆ. ವರಿಷ್ಠರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ನವೆಂಬರ್ 10 ರಂದು ಕೆಂಪೇಗೌಡರ 108 ಅಡಿ ಉದ್ದದ ಪ್ರತಿಮೆ ಉದ್ಘಾಟನೆಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಿದ್ದಾರೆ. ಇದೇ ವೇಳೆ ಅಮಿತ್ ಶಾ, ಜೆ.ಪಿ.ನಡ್ಡಾ ಭೇಟಿ ಮಾಡಿ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಚುನಾವಣಾ ತಯಾರಿ ಬಗ್ಗೆ ವರಿಷ್ಠರಿಗೆ ಸಿಎಂ ಮಾಹಿತಿ ನೀಡಲಿದ್ದಾರೆ. ರಾಯಚೂರು ಜಿಲ್ಲೆಗೆ ಏಮ್ಸ್ ಆಸ್ಪತ್ರೆ ಮಂಜೂರು ಕುರಿತು ಕೇಂದ್ರದ ಆರೋಗ್ಯ ಸಚಿವರನ್ನು ಭೇಟಿಯಾಗಲಿದ್ದಾರೆ.