ಬೆಂಗಳೂರು : ‘ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಸಿಎಂ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.
ಹಿಂದೂ ಪದದ ಅರ್ಥದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ವಿವಾದ ಭುಗಿಲೇಳುತ್ತಿದ್ದಂತೆ ತಮ್ಮ ಹೇಳಿಕೆ ವಾಪಸ್ ಪಡೆದು ವಿಷಾದ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು’ ಎಂದಿದ್ದಾರೆ. ಸತೀಶ್ ಜಾರಕಿಹೊಳಿ ಮಾತನಾಡುವುದು ಅಷ್ಟೇ ಅಲ್ಲ ಅದನ್ನು ಸಮರ್ಥಿಸಿಕೊಂಡಿದ್ದಾರೆ, ಈಗ ಏಕಾಏಕಿ ವಿಷಾದ ವ್ಯಕ್ತಪಡಿಸಿದ್ದಾರೆ ಎಂದರು.
ಸತೀಶ್ ಜಾರಕಿಹೊಳಿ ದುಡುಕುವರಲ್ಲ, ಕಾಂಗ್ರೆಸ್ ಸಹವಾಸದಿಂದ ಹೀಗೆ ಆಗಿದ್ದಾರೆ. ವಿಭಜಿಸುವ ಶಕ್ತಿಗಳ ಜೊತೆ ಕೈ ಜೋಡಿಸುವುದು ಕಾಂಗ್ರೆಸ್ ಅಲ್ಲವೇ ಎಂದು ಸಿಎಂ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ರೈತರ ಪ್ರತಿಭಟನೆ : ನ. 11 ರ ಮಧ್ಯರಾತ್ರಿವರೆಗೆ ‘ಮದ್ಯ’ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ
ಬಾಗಲಕೋಟೆಯಲ್ಲಿ ರೈತರ ಪ್ರತಿಭಟನೆ : ನ. 11 ರ ಮಧ್ಯರಾತ್ರಿವರೆಗೆ ‘ಮದ್ಯ’ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ