ತುಮಕೂರು : ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಎಂದು ಸಿಎಂ ಬೊಮ್ಮಾಯಿ ( Basavaraj bommai ) ಗುಡುಗಿದ್ದಾರೆ.
ತುಮಕೂರಿನ ಕುಣಿಗಲ್ ನಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಜನಸಂಕಲ್ಪ ಯಾತ್ರೆ ನಮ್ಮ ನಿರೀಕ್ಷೆ ಮೀರಿ ಮುನ್ನುಗ್ಗುತ್ತಿದೆ, ಎಲ್ಲೆಡೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದರು.
ಕಾಂಗ್ರೆಸ್ ವಿರುದ್ಧ ಗುಡುಗಿದ ಬೊಮ್ಮಾಯಿ ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಆಗಿದೆ.ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ನ್ನು ಬಿಜೆಪಿ ಕ್ಲೀನ್ ಸ್ವಿಪ್ ಮಾಡಲಿದೆ.
ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ, ಜಾತಿ ಆಧಾರಿತವಾಗಿ ವೋಟ್ ಕೇಳುತ್ತಿದೆ, ಸಿದ್ದರಾಮಯ್ಯ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ತಲೆದಿಂಬು ವಿತರಣೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಸಿಎಂ ಬೊಮ್ಮಾಯಿ ಗುಡುಗಿದ್ದಾರೆ.
BIGG NEWS: ಸಿದ್ರಾಮುಲ್ಲಾ ಖಾನ್ ಎಂದಿದ್ದಕ್ಕೆ ನನಗೇನು ಬೇಸರವಿಲ್ಲ; ಸಿದ್ದರಾಮಯ್ಯ
‘ನಕಲಿ ಮಾರ್ಕ್ಸ್ ಕಾರ್ಡ್ ದಂಧೆ’ : ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ