ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ(CM Basavaraja Bommai) ಅವರು ನಾಳೆ (ಭಾನುವಾರ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಭಾನವಾರ ಬೊಮ್ಮಾಯಿ ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಶಿಗ್ಗಾಂವ ತೆರಳಲಿರುವ ಸಿಎಂ ಬೊಮ್ಮಾಯಿ ಅವರು ಶಿಗ್ಗಾಂವಿ ಮತ್ತು ಸವಣೂರಿನಲ್ಲಿ ವಕೀಲರ ಸಂಘಗಳ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಹಾವೇರಿ ನ್ಯಾಯಾಲಯದ ಆವರಣದಲ್ಲಿ ನಿರ್ಮಾಣವಾಗಿರುವ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಲಿದ್ದಾರೆ.
ಬಳಿಕ ಸಂಜೆ 5-30ಕ್ಕೆ ಹಾವೇರಿಯ ಪ್ರವಾಸಿ ಮಂದಿರದ ಬಳಿ ನಿರ್ಮಿಸಲಾಗಿರುವ ಸಂಚಾರಿ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಸಿಎಂ ನೆರವೇರಿಸಲಿದ್ದಾರೆ.
ಈ ಎಲ್ಲಾ ಕಾರ್ಯಕ್ರಮಗಳ ನಂತರ ಸಂಜೆ ಸಿಎಂ ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಮರಳಲಿದ್ದಾರೆ.
Big news: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿ ಬೆನ್ನಲ್ಲೇ 12 IAS ಅಧಿಕಾರಿಗಳ ವರ್ಗಾವಣೆ
Breaking news: ಡೆಹ್ರಾಡೂನ್ನಲ್ಲಿ ಮೇಘಸ್ಫೋಟ: ಸ್ಥಳಕ್ಕೆ ದೌಡಾಯಿಸಿದ SDRF ತಂಡ, ಹಲವರ ರಕ್ಷಣೆ