ಬೆಂಗಳೂರು: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ( BJP Government ) ಸಚಿವ ಸಂಪುಟ ವಿಸ್ತರಣೆ ( Karnataka Cabinet Expansion ) ಆಗಲಿದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಶೀಘ್ರವೇ ಮಿನಿ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನಲಾಗುತ್ತಿದೆ. ಒಂದು ವೇಳೆ ಸಚಿವ ಸಂಪುಟ ವಿಸ್ತರಣೆಯಾದ್ರೇ ಯಾರೆಲ್ಲಾ ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಬಗ್ಗೆ ಮುಂದೆ ಓದಿ..

BREAKING NEWS: ‘SSLC ಪೂರಕ ಪರೀಕ್ಷೆ’ಯ ಫಲಿತಾಂಶ ಪ್ರಕಟ: ನಾಳೆ ವೆಬ್ ಸೈಟ್ ನಲ್ಲಿ ಲಭ್ಯ | SSLC Supplementary Exam Result 2022

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ( KS Eshwarappa ) ಬಗ್ಗೆ ನ್ಯಾಯಾಲಯಕ್ಕೆ ಆತ್ಮಹತ್ಯೆ ಪ್ರಚೋಜನೆ ಸಂಬಂಧ ಯಾವುದೇ ಸಾಕ್ಷಾಯಾಧಾರಗಳಿಲ್ಲ ಎಂಬುದಾಗಿ ಉಲ್ಲೇಖಿಸಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಹೀಗಾಗಿ ಅವರಿಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತೆ ಸಂಪುಟ ಸೇರೋದಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

BIG NEWS: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ KS ಈಶ್ವರಪ್ಪಗೆ ಕ್ಲೀನ್ ಚಿಟ್: ಈ ಬಗ್ಗೆ ಅವರು ಹೇಳಿದ್ದೇನು ಗೊತ್ತಾ.?

ಆದರೆ ಅವರ ಸಂಪುಟ ಪ್ರವೇಶಕ್ಕೆ ಇರುವುದೊಂದೇ ಅಡ್ಡಿ, ಅದೇ ಈ ಹಿಂದೆ ಲೈಂಗಿಕ ಹಗರಣಕ್ಕೆ ಸಿಲುಕಿ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೊಳಿ ಪ್ರಕರಣ ಇತ್ಯರ್ಥವಾಗಬೇಕು. ರಮೇಶ್ ಜಾರಕಿಹೊಳಿ ಪ್ರಕರಣವೂ ಇನ್ನು ಕೆಲ ದಿನಗಳಲ್ಲಿ ಇತ್ಯರ್ಥವಾಗಲಿದೆ ಎನ್ನಲಾಗುತ್ತಿದೆ. ಈ ಬಳಿಕ ಬೊಮ್ಮಾಯಿ ಸಂಪುಟಕ್ಕೆ ಒಟ್ಟಿಗೇ ಕೆ.ಎಸ್ ಈಶ್ವರಪ್ಪ, ರಮೇಶ್ ಜಾರಕಿಹೊಳಿ ಅವರು ಸೇರ್ಪಡೆ ಆಗಲಿದ್ದಾರೆ ಎಂಬುದಾಗಿ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಈ ಮೂಲಕ ಶೀಘ್ರವೇ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದ ಮಿನಿ ವಿಸ್ತರಣೆಯಾಗಲಿದೆ ಎನ್ನಲಾಗಿದೆ.

BIG NEWS: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ KS ಈಶ್ವರಪ್ಪಗೆ ಕ್ಲೀನ್ ಚಿಟ್: ಈ ಬಗ್ಗೆ ಅವರು ಹೇಳಿದ್ದೇನು ಗೊತ್ತಾ.?

Share.
Exit mobile version