ತುಮಕೂರು:ರಾಜ್ಯದಲ್ಲಿ ಇವತ್ತು ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಿಸಲಿಲ್ಲ ಅಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ ಅಂತ ಗುಬ್ಬಿ ಶಾಸಕ ಶ್ರೀನಿವಾಸ್ ಹೇಳಿರುವುದು ಈಗ ರಾಜ್ಯ ರಾಜಕೀಯದಲ್ಲಿ ಹೊಸ ಅಲೆಯನ್ನು ಹುಟ್ಟುಹಾಕಿದೆ.
ಅವರು ತಿಪಟೂರಿನಲ್ಲಿ(Tiptur) ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಈ ಬಗ್ಗೆ ಮಾತನಾಡುತ್ತ ಹೇಳಿದರು. ಇದೇ ವೇಳೇ ಅವರು ಮಾತನಾಡಿ, ಬಡವರ ಪರ ಕೆಲಸ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಉಳಿಸುವ ಕೆಲಸ ನಾವೆಲ್ಲ ಮಾಡಬೇಕು. ಎಲ್ಲಾ ಕಾರ್ಯಕರ್ತರು ಸಿದ್ದರಾಮಯ್ಯರನ್ನ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಅಂಥ ಅವರುಹೇಳಿದರು.