ಶಿವಮೊಗ್ಗ: ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ.
ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್ ಅವರನ್ನು ಸಾಗರ ವಿಧಾನಸಭಾ ಕ್ಷೇತ್ರದ ಎನ್ ಎಸ್ ಯು ಐ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿರುವುದಜಾಗಿ ತಿಳಿಸಿದ್ದಾರೆ.
ಈ ಜವಾಬ್ದಾರಿಯನ್ನು ತಾವು ವಹಿಸಿಕೊಂಡು, ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಸ್ಥಳೀಯ ನಾಯಕರೊಡನೆ ಸೇರಿಕೊಂಡು, ಪಕ್ಷ ಸಂಘಟನೆಯನ್ನು ಮಾಡುತ್ತಾ, ಪಕ್ಷವನ್ನು ಬಲ ಪಡಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯಲ್ಲಿ ಶ್ರಮಿಸುವಂತೆ ಕೋರಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
BREAKING NEWS : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ