Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಪಡೆ ರಚಿಸಲು ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

Kidney Disease: ‘ಕಿಡ್ನಿ ಸಮಸ್ಯೆ’ಯು ಆರಂಭದಲ್ಲಿ ಲಕ್ಷಣಗಳೇ ತಿಳಿಯದ ‘ಸೈಲೆಂಟ್ ಕಿಲ್ಲರ್’ ಕಾಯಿಲೆ: ಈ ಎಚ್ಚರವಿರಲಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಪಡೆ ರಚಿಸಲು ಸಿಎಂ ಡಿ.ಕೆ ಶಿವಕುಮಾರ್ ಸೂಚನೆ
KARNATAKA

ರಾಜ್ಯದಲ್ಲಿ ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಪಡೆ ರಚಿಸಲು ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಪೊಲೀಸರು ಪ್ರತಿ ತಾಲ್ಲೂಕಿನಲ್ಲಿ ರೌಡಿಗಳ ನಿಗ್ರಹಕ್ಕೆ ಪ್ರತ್ಯೇಕ ಪಡೆ ರಚಿಸಬೇಕು. ಇವರು ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗಿಯಾಗದಂತೆ ನೋಡಿಕೊಳ್ಳಬೇಕು. ಹಳೇ ರೌಡಿಗಳು ಹಾಗೂ ಹೊಸದಾಗಿ ಹುಟ್ಟುಕೊಳ್ಳುವ ರೌಡಿಗಳ ಮೇಲೆ ನಿಗಾ ಇಡಬೇಕು ಎಂದು ಸೂಚಿಸಿರುವೆ ಎಂಬುದಾಗಿ ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳ ಸಭೆ ನಡೆಸಿದರು. ನಂತರ ಮಾಧ್ಯಮಗೋಷ್ಠಿ ನಡೆಸಿ ಸಭೆಯ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದರು.

“ಸಕಾಲ ವಿಚಾರದಲ್ಲಿ ಜನರಿಗೆ ಹೆಚ್ಚಿನ ಅನುಕೂಲವಾಗಬೇಕು. ಕರ್ನಾಟಕ ಭವನ ಕಾರ್ಯಾಚರಣೆಯಲ್ಲಿ ನನಗೆ ತೃಪ್ತಿಯಿಲ್ಲ. ಹೀಗಾಗಿ ನಾನು ದೆಹಲಿಗೆ ಹೋಗಿ, ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಸಭೆ ಮಾಡಿ ಕೆಲವು ವಿಭಾಗಗಳನ್ನು ರಚಿಸಲಾಗುವುದು. ದೆಹಲಿಯಲ್ಲಿರುವ ನಮ್ಮ ರಾಜ್ಯದ ಅಧಿಕಾರಿಗಳು, ರಾಜ್ಯದ ಯೋಜನೆಗಳ ಅನುಷ್ಠಾನಕ್ಕೆ ಗರಿಷ್ಠ ಪ್ರಯತ್ನ ಮಾಡಬೇಕು” ಎಂದು ಹೇಳಿದರು.

“ಹದಿನೈದು ದಿನಗಳ ಒಳಗಾಗಿ ಎಲ್ಲಾ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಬಗ್ಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಆದೇಶಿಸಿದ್ದೇನೆ. 56 ಸಾವಿರ ಹುದ್ದೆಗಳ ಭರ್ತಿಗೆ ಸಮಯ ನಿಗದಿ ಮಾಡಲಾಗುವುದು. ಜೊತೆಗೆ ದಿನಾಂಕವನ್ನು ತಿಳಿಸಲಾಗುವುದು. ಖಾಸಗಿ ಉದ್ಯೋಗ ವಿನಿಮಯ ಕೇಂದ್ರವನ್ನೂ ಸ್ಥಾಪಿಸಲಾಗುವುದು. ಎಲ್ಲಾ ಖಾಸಗಿ, ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಅನುಕೂಲವಾಗುವಂತೆ, ಯುವಕರಿಗೆ ಕೆಲಸ ಸಿಗುವಂತೆ ಸೌಲಭ್ಯ ಕಲ್ಪಿಸಲಾಗುವುದು” ಎಂದರು‌.

ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಯುವಕರಿಗಾಗಿ ಯೋಜನೆಗಳನ್ನು ನೀಡುತ್ತಿರುವ ಬಗ್ಗೆ ಕೇಳಿದಾಗ, “ಯಾವುದೇ ಚುನಾವಣೆಯನ್ನು ನಾವು ಗಮನದಲ್ಲಿಟ್ಟುಕೊಂಡು ಈ ಕೆಲಸ ಮಾಡುತ್ತಿಲ್ಲ. ಯುವಕರ ಜೀವನದ ಗುಣಮಟ್ಟ ನೋಡುತ್ತಿದ್ದೇವೆ. ಬೆಲೆ ಏರಿಕೆ ಸಮಯದಲ್ಲಿ ಜನರ ಜೀವನ ಮಟ್ಟ ಸುಧಾರಿಸಲು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ‌. ಪ್ರತಿಯೊಬ್ಬ ನಾಗರಿಕ ಕನಿಷ್ಠ ಸುರಕ್ಷಿತ ಜೀವನ ಹೊಂದಿರಬೇಕು ಎಂಬುದು ನಮ್ಮ ಆಶಯ. ಗುಣಮಟ್ಟದ ಶಿಕ್ಷಣ, ಗುಣಮಟ್ಟದ ಜೀವನ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಪಡೆಯಲಿದ್ದಾರೆ. ಹುಡುಗರಾಗಲಿ ಅಥವಾ ಹುಡುಗಿಯಾಗಲಿ, ಅವರು ಯಾವುದೇ ವಯಸ್ಸಿನವರಾಗಲಿ, ಅವರೆಲ್ಲರೂ ಉಚಿತ ಬಸ್ ಪಾಸ್ ಪಡೆಯಲಿದ್ದಾರೆ” ಎಂದು ಹೇಳಿದರು.

ಸಚಿವರುಗಳಿಗೆ ಖಾತೆ ಹಂಚಿಕೆ ಬಗ್ಗೆ ಕೇಳಿದಾಗ, “ಹೊತ್ತು ಮುಳುಗುವುದರೊಳಗೆ ಆಗಲಿದೆ” ಎಂದರು.

ಖಾತೆ ಹಂಚಿಕೆಯಲ್ಲಿ ಗೊಂದಲಗಳಿವೆ, ಇಂತಹುದೇ ಖಾತೆ ಬೇಕು ಎಂದು ಬೇಡಿಕೆ ಇಡುತ್ತಿದ್ದಾರೆ ಎಂಬ ಚರ್ಚೆ ಬಗ್ಗೆ ಕೇಳಿದಾಗ, “ನಿಮ್ಮಲ್ಲಿ ಗೊಂದಲವಿರಬೇಕು. ನನ್ನ ಬಳಿ ಬಂದು ಯಾರು ಚರ್ಚೆ ಮಾಡಿಲ್ಲ” ಎಂದರು.

ನೀವು ಸೇರಿದಂತೆ ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಬೇಡಿಕೆ ಇದೆ ಎಂದು ಕೇಳಿದಾಗ, “ಗಾಳಿ ಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಊಹಾಪೋಹದ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಖಾತೆ ಹಂಚಿಕೆ ವಿಚಾರವಾಗಿ ಪಕ್ಷ ತೀರ್ಮಾನ ಮಾಡಲಿದೆ. ಪಕ್ಷ ನನ್ನನ್ನು ಮುಖ್ಯಮಂತ್ರಿ ಮಾಡಿದೆ. ನಾನು ಯಾವ ಕೆಲಸ ಮಾಡಬೇಕು ಎಂದು ಹೇಳಿದೆ. ನಾನು ಆ ಕೆಲಸ ಮಾಡುತ್ತೇನೆ. ಪಕ್ಷ ಯಾರಿಗೆ ಯಾವ ಕೆಲಸ ಹೇಳಿದೆಯೋ ಆ ಕೆಲಸ ಮಾಡುತ್ತಾರೆ” ಎಂದು ಹೇಳಿದರು.

ಬಿಜೆಪಿ ನಾಯಕರು ನಿಮ್ಮ ಹೊಸ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲ ಎಲ್ಲಿದೆ ಎಂದು ತಿಳಿಸಲಿ ಎಂದು ಸವಾಲು ಹಾಕಿದ್ದಾರೆ ಎಂದು ಕೇಳಿದಾಗ, “ಖಂಡಿತಾವಾಗಿ, ಈ ಬಗ್ಗೆ ಮಾಹಿತಿ ನೀಡದೇ ನಾವು ಏನನ್ನೂ ಮಾಡುವುದಿಲ್ಲ. ಅವರಿಗೂ ಮಾಹಿತಿ ನೀಡುತ್ತೇವೆ, ಮಾಧ್ಯಮಗಳಿಗೂ ಮಾಹಿತಿ ನೀಡುತ್ತೇವೆ” ಎಂದು ಹೇಳಿದರು.

Kidney Disease: ‘ಕಿಡ್ನಿ ಸಮಸ್ಯೆ’ಯು ಆರಂಭದಲ್ಲಿ ಲಕ್ಷಣಗಳೇ ತಿಳಿಯದ ‘ಸೈಲೆಂಟ್ ಕಿಲ್ಲರ್’ ಕಾಯಿಲೆ: ಈ ಎಚ್ಚರವಿರಲಿ!

Share. Facebook Twitter LinkedIn WhatsApp Email

Related Posts

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

1 Min Read

BREAKING: ಸಿಎಂ ಡಿಕೆಶಿ ಸಭೆಯಲ್ಲಿ ಹೈ-ಡ್ರಾಮಾ: ಸಿಟ್ಟಿಗೆದ್ದು ಸಭೆಯಿಂದಲೇ ಹೊರನಡೆದ ಸಚಿವ ರಾಮಲಿಂಗಾರೆಡ್ಡಿ!

1 Min Read

ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್, ನೂತನ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

1 Min Read
Recent News

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಪಡೆ ರಚಿಸಲು ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

Kidney Disease: ‘ಕಿಡ್ನಿ ಸಮಸ್ಯೆ’ಯು ಆರಂಭದಲ್ಲಿ ಲಕ್ಷಣಗಳೇ ತಿಳಿಯದ ‘ಸೈಲೆಂಟ್ ಕಿಲ್ಲರ್’ ಕಾಯಿಲೆ: ಈ ಎಚ್ಚರವಿರಲಿ!

BREAKING: ಸಿಎಂ ಡಿಕೆಶಿ ಸಭೆಯಲ್ಲಿ ಹೈ-ಡ್ರಾಮಾ: ಸಿಟ್ಟಿಗೆದ್ದು ಸಭೆಯಿಂದಲೇ ಹೊರನಡೆದ ಸಚಿವ ರಾಮಲಿಂಗಾರೆಡ್ಡಿ!

State News
KARNATAKA

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ನೈಋತ್ಯ ಮುಂಗಾರು (Monsoon) ಜೂನ್ 4 ರಂದು ಅಧಿಕೃತವಾಗಿ ಕೇರಳ ಕರಾವಳಿಯನ್ನು ಪ್ರವೇಶಿಸಿದೆ.…

ರಾಜ್ಯದಲ್ಲಿ ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಪಡೆ ರಚಿಸಲು ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

BREAKING: ಸಿಎಂ ಡಿಕೆಶಿ ಸಭೆಯಲ್ಲಿ ಹೈ-ಡ್ರಾಮಾ: ಸಿಟ್ಟಿಗೆದ್ದು ಸಭೆಯಿಂದಲೇ ಹೊರನಡೆದ ಸಚಿವ ರಾಮಲಿಂಗಾರೆಡ್ಡಿ!

ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್, ನೂತನ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.