ಬೆಂಗಳೂರು: ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿನ ಜಾತಿಗಳ ಅಂಕಿಅಂಶಗಳ ಬಗ್ಗೆ ಅಧ್ಯಯನ ಮಾಡಲು ತಜ್ಞರ ತಂಡ ಅಥವಾ ಹಿರಿಯ ಸಚಿವರನ್ನೊಳಗೊಂಡ ಸಚಿವ ಸಂಪುಟ ಉಪ ಸಮಿತಿಯನ್ನು ರಚನೆ ಮಾಡುವುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಈ ಕುರಿತಂತೆ ಸಿಎಂ, ಡಿಸಿಎಂಗೆ ಪತ್ರ ಬರೆದಿರುವಂತ ಅವರು, ಕಾಂತರಾಜು ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಬಗ್ಗೆ ಈಗ ರಾಜ್ಯದೆಲ್ಲಡೆ ಚರ್ಚೆಯಾಗುತ್ತಿದೆ. ಈ ವಿಷಯ ಈಗ ದೇಶದ ಗಮನವನ್ನೂ ಸೆಳೆದಿದೆ. ರಾಷ್ಟ್ರಕವಿ ಕುವೆಂಪು ಅವರ ಸಾಲುಗಳಾದ “ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಪರಿಕಲ್ಪನೆಯಡಿ ಎಲ್ಲರಿಗೂ ಸಮಾನ ನ್ಯಾಯ ಸಿಗಬೇಕೆಂಬುದು ನಮ್ಮ ಕಾಂಗ್ರೆಸ್ ಸರ್ಕಾರದ ಗುರಿ ಹಾಗೂ ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಎರಡು ಮಾತಿಲ್ಲ ಎಂದಿದ್ದಾರೆ.
ಆದರೆ, ಈಗ ಸಂಪುಟದ ಮುಂದೆ ಈ ವರದಿಯನ್ನು ಚರ್ಚೆಗೆ ತಂದಿರುವುದು ಹಲವು ರೀತಿಯ ವಿಶ್ಲೇಷಣೆಯನ್ನು ಹುಟ್ಟುಹಾಕಿದೆ. ಆಯೋಗದ ವರದಿ ಜಾರಿ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲಿಯೇ ಹೇಳಿರುವುದರಿಂದ ಈಗ ವಿಪಕ್ಷಗಳು ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ. ಆದರೀಗ ಇದು ಹಲವಾರು ಸಮುದಾಯದವರ ಆತಂಕಕ್ಕೆ ಕಾರಣವಾಗಿದೆ. ಸರ್ಕಾರದ ಬಗ್ಗೆ, ಕಾಂಗ್ರೆಸ್‌ನ ಆಶಯದ ಬಗ್ಗೆ ತಪ್ಪು ಕಲ್ಪನೆಗಳು ಹೊರ ಹೋಗಲು ಬಿಡಬಾರದು ಇಂಥವುಗಳಿಗೆ ಕಡಿವಾಣ ಹಾಕಲು ಮತ್ತು ಜನರಿಗೂ ಗೊಂದಲ ಬಗೆಹರಿಸುವ ನಿಟ್ಟಿನಲ್ಲಿ ಈಗ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಚಿಸಿರುವ ಸಮೀಕ್ಷಾ ವರದಿಗೆ ಸಂಬಂಧಪಟ್ಟಂತೆ ಜಾತಿಗಳ ಅಂಕಿಅಂಶಗಳ ಬಗ್ಗೆ ಅಧ್ಯಯನ ಮಾಡಲು ತಜ್ಞರ ತಂಡ ಅಥವಾ ಹಿರಿಯ ಸಚಿವರನ್ನೊಳಗೊಂಡ ಸಂಪುಟ ಉಪ ಸಮಿತಿಯನ್ನು ರಚನೆ ಮಾಡಬೇಕಾಗಿ ಮನವಿ ಮಾಡಿದ್ದಾರೆ.
ಈಗಾಗಲೇ ಜಾತಿ ಗಣತಿ ವರದಿ ಎಂದೇ ಬಿಂಬಿತವಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಬಗ್ಗೆ ಕೆಲವರು ಅಪಸ್ವರ ಎತ್ತಿದ್ದಾರೆ. ಆದರೆ, ಸಾಮಾಜಿಕ ಸ್ಥಿತಿಗತಿಯನ್ನು ಅರಿತು ನಿಜವಾಗಿಯೂ ಸಂಕಷ್ಟದಲ್ಲಿರುವ ಸಮುದಾಯಗಳಿಗೆ ನ್ಯಾಯ ಕೊಡಿಸುವ ಹಾಗೂ ಅಂಥವರನ್ನು ಸಮಾಜದಲ್ಲಿ ಮುನ್ನೆಲೆಗೆ ತರಲು ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಯೋಜನೆಗಳನ್ನು ಘೋಷಣೆ ಮಾಡುವ ಉದ್ದೇಶ ನಮ್ಮ ಸರ್ಕಾರಕ್ಕೆ. ಇದ್ದರು ಆದರೀಗ ಈ ಸಮೀಕ್ಷೆ ಬಗ್ಗೆ ರಾಜ್ಯದ ಹಲವು ಕಡೆ, ಹಲವು ಸಮುದಾಯದವರು. ರಾಜಕೀಯ ಪಕ್ಷದ ಮುಖಂಡರು. ಕೆಲವು ಸ್ವಾಮಿಜೀಗಳು. ಹಾಗೂ ಸಂಘ ಸಂಸ್ಥೆಗಳು ಆತಂಕವನ್ನು ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.
ಸಹಜವಾಗಿ ತಮ್ಮ ಸಮುದಾಯಕ್ಕೆ ಅನ್ಯಾಯವಾದರೆ ಎಂಬ ಗೊಂದಲ, ಆತಂಕ ಅವರಲ್ಲಿ ಮನೆಮಾಡಿದೆ. ಇದನ್ನು ದೂರ ಮಾಡುವ ನಿಟ್ಟಿನಲ್ಲಿ ತಾವುಗಳು ಅಗತ್ಯ ಕ್ರಮ ವಹಿಸಬೇಕಿದೆ. ಈ ನಿಟ್ಟಿನಲ್ಲಿ ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿನ ಜಾತಿಗಳ ಅಂಕಿಅಂಶಗಳ ಬಗ್ಗೆ ಅಧ್ಯಯನ ಮಾಡಲು ಒಂದು ತಜ್ಞರ ತಂಡ ಅಥವಾ ಹಿರಿಯ ಸಚಿವರನ್ನೊಳಗೊಂಡ ಸಚಿವ ಸಂಪುಟ ಉಪ ಸಮಿತಿಯನ್ನು ರಚನೆ ಮಾಡಿ ಅಧ್ಯಯನ ಮಾಡಿಸಿ ಒಂದು ವರದಿಯನ್ನು ಪಡೆದು . ಆ ಬಳಿಕ ಸಂಪುಟದಲ್ಲಿ ಚರ್ಚೆ ನಡೆಸಿ ಈ ನಿಟ್ಟಿನಲ್ಲಿ ಕ್ರಮವಹಿಸಲು ರಾಜ್ಯದ ಮಹಾ ಜನತೆ ಪರವಾಗಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.
ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ: ಸಚಿವ ಪ್ರಿಯಾಂಕ್ ಖರ್ಗೆ
BREAKING: ಮರಾಠ ಕ್ಷತ್ರೀಯ ಸಂಪ್ರದಾಯದಂತೆ ನೆರವೇರಿದ ನಟ ಬ್ಯಾಂಕ್ ಜನಾರ್ಧನ್ ಅಂತ್ಯಕ್ರಿಯೆ: ಇನ್ನೂ ನೆನಪು ಮಾತ್ರ