Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿ ಕೆಂಪುಕೋಟೆ ದಾಳಿ ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಹಿರಂಗ: ದಕ್ಷಿಣ ಏಷ್ಯಾದ ಶಾಂತಿ ಕದಡಲು ಪಾಕಿಸ್ತಾನದ ‘ಬೃಹತ್ ಸಂಚು’!

ಕೇಂದ್ರದ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ

Shocking: ವಿಶ್ವದ ಟಾಪ್ 10 ಅತ್ಯಂತ ಕಲುಷಿತ ವಿಮಾನ ನಿಲ್ದಾಣಗಳ ಪಟ್ಟಿ ಬಿಡುಗಡೆ; 7ನೇ ಸ್ಥಾನದಲ್ಲಿ ಭಾರತ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಕ್ಕಳಲ್ಲಿ ಸೃಜನಶೀಲತೆ ಅರಳಲು ‘ಮೂರು ಮಂತ್ರ’ ಕೊಟ್ಟ ‘ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್’
KARNATAKA

ಮಕ್ಕಳಲ್ಲಿ ಸೃಜನಶೀಲತೆ ಅರಳಲು ‘ಮೂರು ಮಂತ್ರ’ ಕೊಟ್ಟ ‘ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್’

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ಮಕ್ಕಳಲ್ಲಿ ಕುತೂಹಲ ಕೆರಳಿಸುವುದು, ಮಕ್ಕಳಿಗೆ ಸೂಕ್ತ ಅವಕಾಶ ಕಲ್ಪಿಸುವುದು ಮತ್ತು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವುದರಿಂದ ಅವರೊಳಗಿನ ಸೃಜನಶೀಲತೆ ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.

ಪ್ರೆಸ್ ಕ್ಲಬ್ ಮತ್ತು ಬಾಲ ಭವನ ಆಯೋಜಿಸಿದ್ದ ಚಿಣ್ಣರ ಜಾಗೃತಿ-ಪ್ರಶಸ್ತಿ ಸಂಭ್ರಮ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

ಪ್ರತಿ ಮಗುವೂ ಹುಟ್ಟುತ್ತಲೇ ಪ್ರತಿಭೆಗಳ ಕಣಜ ಆಗಿರುತ್ತದೆ. ಆ ಮಗುವಿನ ಮನಸ್ಸಿನ, ಆಲೋಚನೆಯ ಕಿಟಕಿ ತೆರೆದಾಗ ಪ್ರತಿಭೆ ಹೊರಗೆ ಬರುತ್ತದೆ. ಆದ್ದರಿಂದ ಮಕ್ಕಳನ್ನು ಯಾರೂ ಪ್ರತಿಭಾವಂತರನ್ನಾಗಿ ಮಾಡುವ ಅಗತ್ಯವಿಲ್ಲ. ಪ್ರತಿಭೆ ಅರಳಲು ಅಗತ್ಯವಾದ ವಾತಾವರಣ ಕಲ್ಪಿಸಿದರೆ ಸಾಕು ಎಂದರು.

ಮಕ್ಕಳ ಬೆನ್ನು ತಟ್ಟುವುದು, ಪ್ರತಿಭೆ ಗುರುತಿಸುವುದು ಎಂದರೆ, ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ. ಕೀಲೆಣ್ಣೆ ಹಾಕಿದರೆ ಚಕ್ರ ಚನ್ನಾಗಿ ಚಲಿಸುತ್ತದೆ. ಹಾಗೆಯೇ ಪ್ರೋತ್ಸಾಹ, ಪುರಸ್ಕಾರ ಸಿಕ್ಕರೆ ಮಕ್ಕಳ ಪ್ರತಿಭೆ ಅರಳುತ್ತದೆ ಎಂದರು.

ಇಂದು ಪುರಸ್ಕಾರಗೊಂಡ ಮಕ್ಕಳಿಗೆ ನಾನೊಂದು ಕಿವಿಮಾತು ಹೇಳಲು ಬಯಸುತ್ತೇನೆ.‌ ನೀವುಗಳು ಕಲಿಕೆಯ ಕುತೂಹಲ ಮತ್ತು ಅಧ್ಯಯನಶೀಲತೆಯನ್ನು ಯಾವತ್ತೂ ಕಳೆದುಕೊಳ್ಳಬಾರದು. ಇಲ್ಲದಿದ್ದರೆ ನಿಮ್ಮೊಳಗಿನ ಪ್ರತಿಭೆ ಬಾಡುತ್ತದೆ. ಮೊಬೈಲ್, ಟ್ಯಾಬ್ ಗಳ ಗೀಳು ನಿಮ್ಮೊಳಗಿನ ಸೃಜನಶೀಲತೆಯನ್ನು ಕೊಂದು ಪ್ರತಿಭಾಶೂನ್ಯರನ್ನಾಗಿಸುತ್ತದೆ. ವೀಡಿಯೊ ಗೇಮ್ ಗಳು ಕೇವಲ kill, target, fight ಅನ್ನುವ ಆಕ್ರಮಣಕಾರಿ ವರ್ತನೆಯನ್ನೇ ಬೆಳೆಸುತ್ತವೆ. ಹೀಗಾಗಿ ಮೊಬೈಲ್ ಬಿಡಿ-ಪುಸ್ತಕ ಹಿಡಿ-ಮೈದಾನದ ಕಡೆ ನಡಿ ಎನ್ನುವುದನ್ನು ಮಕ್ಕಳು ಪಾಲಿಸುತ್ತಾ, ಕಲಿಕೆಯ ಕುತೂಹಲ, ಅಧ್ಯಯನಶೀಲತೆಯನ್ನು ಬದುಕಿನ ಕೊನೆ ಕ್ಷಣದವರೆಗೂ ಪಾಲಿಸಿ ಎಂದು ಕರೆ ನೀಡಿದರು.

ಮಕ್ಕಳ ದೃಷ್ಟಿಕೋನದಲ್ಲಿ ಭವಿಷ್ಯದ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದ ಜವಾಹರಲಾಲ್ ನೆಹರೂ ಅವರ ಗುರಿಯ ಭಾಗವಾಗಿಯೇ ಬಾಲಭವನ ಸ್ಥಾಪನೆಯಾಗಿದೆ. ಅದಕ್ಕೇ “ಜವಾಹರ ಬಾಲ ಭವನ” ಅಂತಲೇ ಹೆಸರಿಡಲಾಗಿದೆ ಎಂದರು.

ಮಕ್ಕಳು ಮಣ್ಣಿನಿಂದ ಬೇರ್ಪಟ್ಟು, ನೆಲದ ಆಟ ಪಾಠಗಳಿಂದ ದೂರ ಆಗಿದ್ದಾರೆ. ಅಜ್ಜ-ಅಜ್ಜಿ ಕತೆಗಳಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಅದಕ್ಕೇ ತಮ್ಮ ಆಟದ ಸಾಮಾನುಗಳನ್ನು ತಾವೇ ಸೃಷ್ಟಿಸಿಕೊಳ್ಳುವ ಕ್ರಿಯಾಶೀಲತೆಯೂ ಕಾಣೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿರು.

ಕತೆಗಳನ್ನು ಕೇಳುವ ಮೂಲಕ ಮಕ್ಕಳ ಕಲ್ಪನಾ ಜಗತ್ತು ವಿಪರೀತ ವಿಕಾಸಗೊಳ್ಳುತ್ತಿತ್ತು. ಇದನ್ನು ಜವಾಹರಲಾಲ್ ನೆಹರೂ ಅವರು ಮನಗಂಡಿದ್ದರು. ಮಕ್ಕಳ ದೃಷ್ಟಿಕೋನದಲ್ಲಿ ದೇಶದ ಅಭಿವೃದ್ಧಿ ಮತ್ತು ಪ್ರಗತಿಯ ನೀಲನಕ್ಷೆ ನೆಹರೂ ಅವರು ಸಿದ್ದಪಡಿಸಿದ್ದರು ಎಂದು ಸ್ಮರಿಸಿದರು.

ನೆಹರೂ ಅವರು, “ಮಕ್ಕಳು ತೋಟದಲ್ಲಿರುವ ಮೊಗ್ಗುಗಳಂತೆ, ಈ ಮೊಗ್ಗುಗಳನ್ನು ಎಚ್ಚರಿಕೆಯಿಂದ ಪ್ರೀತಿಯಿಂದ ಪೋಷಿಸಬೇಕು, ಆಗಷ್ಟೆ ಜವಾಬ್ದಾರಿಯುತ ನಾಗರಿಕರು ರೂಪುಗೊಳ್ಳುತ್ತಾರೆ” ಎನ್ನುವ ಸ್ಪಷ್ಟವಾದ ವೈಜ್ಞಾನಿಕ ತಿಳಿವಳಿಕೆ ಮತ್ತು ದೂರ ದೃಷ್ಟಿ ಹೊಂದಿದ್ದರು.

ಈ ದೂರದೃಷ್ಟಿಯಿಂದ ಬಾಲಭವನ‌ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

ಬಾಲ ಭವನದ ಜೊತೆಗೆ ಪ್ರೆಸ್ ಕ್ಲಬ್ ಕೂಡ ಕೈ ಜೋಡಿಸಿ ಪತ್ರಕರ್ತರ ಮಕ್ಕಳಿಗೆ ಅವರೊಳಗಿನ ಕ್ರಿಯಾಶೀಲತೆ ಅರಳಲು, ಮನೋಲೋಕ ವಿಸ್ತಾರಗೊಳ್ಳಲು ಮುಂದಾಗಿರುವುದು ಆರೋಗ್ಯಕಾರಿ ಬೆಳವಣಿಗೆ ಎಂದು ಶ್ಲಾಘಿಸಿದರು.

ಬಿಡಿಎ ಅಧ್ಯಕ್ಷರಾದ ಎನ್.ಎ.ಹ್ಯಾರಿಸ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್, ನಟ ಹಾಗೂ ಕಲಾ ನಿರ್ದೇಶಕ ಅರುಣ್ ಸಾಗರ್ , ಬಾಲ ಭವನ‌ ಅಧ್ಯಕ್ಷರಾದ ಬಿ.ಆರ್.ನಾಯ್ಡು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹೇಶ್, ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರ ಆಪ್ತ ಕಾರ್ಯದರ್ಶಿ ನಟರಾಜ್, ಜನಪದ ಕಲಾವಿದ ಪಿಚ್ಚಳ್ಳಿ ಶ್ರೀನಿವಾಸ್, ಗಾಯಕ ಅಕ್ಬರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ: ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು

BREAKING: ಅ.31ರವರೆಗೆ ರಾಜ್ಯಾಧ್ಯಂತ ‘ಜಾತಿಗಣತಿ ಸಮೀಕ್ಷೆ’ ವಿಸ್ತರಣೆ, ಶಿಕ್ಷಕರನ್ನು ಗಣತಿಕಾರ್ಯದಿಂದ ಬಿಡುಗಡೆ

Share. Facebook Twitter LinkedIn WhatsApp Email

Related Posts

ಕೇಂದ್ರದ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ

2 Mins Read

ರಾಜ್ಯದ SC, ST ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ಉಚಿತ ವಿಶೇಷ ತರಬೇತಿಗೆ ಅರ್ಜಿ ಆಹ್ವಾನ

2 Mins Read

ಕಾರ್ಮಿಕರ ಕನಿಷ್ಠ ವೇತನ ನಿಗದಿ ಕುರಿತು ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಮಹತ್ವದ ಸಭೆ

1 Min Read
Recent News

ದೆಹಲಿ ಕೆಂಪುಕೋಟೆ ದಾಳಿ ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಹಿರಂಗ: ದಕ್ಷಿಣ ಏಷ್ಯಾದ ಶಾಂತಿ ಕದಡಲು ಪಾಕಿಸ್ತಾನದ ‘ಬೃಹತ್ ಸಂಚು’!

ಕೇಂದ್ರದ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ

Shocking: ವಿಶ್ವದ ಟಾಪ್ 10 ಅತ್ಯಂತ ಕಲುಷಿತ ವಿಮಾನ ನಿಲ್ದಾಣಗಳ ಪಟ್ಟಿ ಬಿಡುಗಡೆ; 7ನೇ ಸ್ಥಾನದಲ್ಲಿ ಭಾರತ!

ನಿಮ್ಮ ಮನೆಯ ಮಿಕ್ಶ್ಚರ್ ಅಸಲಿಯೇ ಅಥವಾ ನಕಲಿಯೇ? ಹೀಗೆ ಪತ್ತೆಹಚ್ಚಿ!

State News
KARNATAKA

ಕೇಂದ್ರದ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಲಾ 3 ರೂಪಾಯಿ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕದ…

ರಾಜ್ಯದ SC, ST ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ಉಚಿತ ವಿಶೇಷ ತರಬೇತಿಗೆ ಅರ್ಜಿ ಆಹ್ವಾನ

ಕಾರ್ಮಿಕರ ಕನಿಷ್ಠ ವೇತನ ನಿಗದಿ ಕುರಿತು ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಮಹತ್ವದ ಸಭೆ

Namma Metro: ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಮೇ.17ರಂದು ನೇರಳೆ ಮಾರ್ಗದಲ್ಲಿ 2 ಗಂಟೆ ಅವಧಿಗೆ ತಾತ್ಕಾಲಿಕವಾಗಿ ರೈಲು ಸ್ಥಗಿತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.