ಬೆಂಗಳೂರು: ಇಂದು ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ( Congress Leader KGF Babu ) ಅವರನ್ನು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ( JDS State President CM Ibrahim ) ಭೇಟಿ ಮಾಡಿರೋದು ತೀವ್ರ ಕುತೂಹಲ ಮೂಡಿಸಿದೆ. ಅಲ್ಲದೇ ಕಾಂಗ್ರೆಸ್ ತೊರೆದು ಕೆಜಿಎಫ್ ಬಾಬು ಜೆಡಿಎಸ್ ಪಕ್ಷ ಸೇರಲಿದ್ದಾರಾ ಎನ್ನುವ ಕುತೂಹಲಕ್ಕೂ ಕಾರಣವಾಗಿದೆ.
ಖುದ್ದು ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಭೇಟಿ ನೀಡಿದಂತ ಸಿಎಂ ಇಬ್ರಾಹಿಂ ಅವರು, ಸುಮಾರು ಎರಡೂವರೆ ಗಂಟೆಗಳ ಕಾಲ ಬಿಸಿ ಬಿಸಿ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ( JDS Party ) ಸೇರುವಂತೆಯೂ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಪಕ್ಷ ಮನವೊಲಿಕೆಯ ರಾಜಕಾರಣ ಮಾಡುತ್ತಿದೆ – ಸಿಎಂ ಬಸವರಾಜ ಬೊಮ್ಮಾಯಿ
ಅಂದಹಾಗೇ ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ಅವರು ಚಿಕ್ಕಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಆದ್ರೇ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಚಿಕ್ಕಪೇಟೆ ಕ್ಷೇತ್ರಕ್ಕೆ ಟಿಕೆಟ್ ಸಿಗೋದು ಡೌಟ್ ಎಂದು ಹೇಳಲಾಗುತ್ತಿದೆ. ಹೀಗಾಗಿಯೇ ಜೆಡಿಎಸ್ ಪಕ್ಷದಿಂದ ಚಿಕ್ಕಪೇಟೆಯಿಂದ ಟಿಕೆಟ್ ಪಡೆದು ನಿಲ್ಲೋ ಯೋಚನೆಯಲ್ಲಿ ಇದ್ದಾರೆ ಎನ್ನಲಾಗಿದೆ. ಆ ಬಗ್ಗೆ ಕಾದು ನೋಡಬೇಕಿದೆ.
‘PSI’ ನೇಮಕಾತಿ ಹಗರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ, ಸಿಐಡಿ ಮೇಲೆ ನಂಬಿಕೆಯಿಲ್ಲ :ಸಿದ್ದರಾಮಯ್ಯ