ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸಿಎಂ ಇಬ್ರಾಹಿಂ ಮುಂದುವರಿಯುತ್ತಾರೆ. ಚುನಾವಣೆ ಸೋಲಿನ ಹೊಣೆ ಹೊತ್ತು ಸಿಎಂ ಇಬ್ರಾಹಿಂ ರಾಜೀನಾಮೆ ಕೊಟ್ಟಿದ್ದಾರೆ. ಅವರನ್ನು ಮುಂದುವರೆಸಬೇಕಾ, ಬೇಡವಾ ಅಂತ ನಾವು ನಿರ್ಧಾರ ಮಾಡುತ್ತೇವೆ. ಅವರ ರಾಜೀನಾಮೆ ಅಂಗೀಕಾರ ಮಾಡಿಲ್ಲ. ಆದರೆ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ನೀಡಿದ್ದಾರೆ. ಅವರ ರಾಜೀನಾಮೆ ಕೂಡಾ ಅಂಗೀಕಾರ ಆಗಿಲ್ಲ. ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೂ ಯಾರನ್ನು ನೇಮಿಸಬೇಕು ಅಂತಾ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದಾಗ ಮಧ್ಯಪ್ರವೇಶ ಮಾಡಿದ ಸಿಎಂ ಇಬ್ರಾಹಿಂ ಅವರು, ನಿಖಿಲ್ ಅವರೂ ಕೂಡ ಮುಂದುವರಿಯುತ್ತಾರೆ ಎಂದು ತಿಳಿಸಿದರು.
ಈ ಐದು ಗ್ಯಾರಂಟಿ ಗಳನ್ನು ಕಾಂಗ್ರೆಸ್ ಜಾರಿಗೆ ತರಲು ಕಷ್ಟ. ಅಡ್ಡದಾರಿಯಲ್ಲಿ ಅಧಿಕಾರಕ್ಕೆ ಅವರಿಂದ ಜನರ ಆಶೋತ್ತರಗಳನ್ನು ಈಡೇರಿಸಲು ಸಾಧ್ಯ ಇಲ್ಲ. ಸಿದ್ದರಾಮಯ್ಯ ಅವರು ಚುನಾವಣೆಗೆ ಮುನ್ನ ಭಾಷಣದಲ್ಲಿ ಎಲ್ಲರಿಗೂ ಫ್ರೀ ಅಂತಾ ಹೇಳ್ತಾ ಇದ್ದರು. ಬಸ್ ಪಾಸ್ ಎಲ್ಲಾ ಕಡೆ ಫ್ರೀ ಅಂತ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಮೊದಲ ಸಂಪುಟ ಸಭೆಯಲ್ಲಿಯೇ ಐದು ಗ್ಯಾರಂಟಿಗಳನ್ಹು ಜಾರಿ ಮಾಡುತ್ತೇವೆ ಎಂದು ಅವರು ಹೇಳಿದ್ದರು. ಆದರೆ, ಅವರು ಮಾತು ತಪ್ಪಿದ್ದಾರೆ ಎಂದು ಕಿಡಿಕಾರಿದರು.
ಈ ವಿಚಾರದಲ್ಲಿ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಜನ ಏನು ತೀರ್ಮಾನ ತೆಗೆದುಕೊಳ್ತಾರೋ ಗೊತ್ತಿಲ್ಲ. ನಾವಂತೂ ಹೋರಾಟ ಮಾಡಲು ಸಿದ್ದ. ಜನರಿಗೆ ತಮಗೆ ಅನ್ಯಾಯ ಆಗಿದೆ ಎಂದರೆ ನಮ್ಮ ಜತೆ ಕೈಜೋಡಿಸಲಿ ಎಂದು ಅವರು ಹೇಳಿದರು.
ಮೇ.28ರಂದು ‘UPSC ಪೂರ್ವಭಾವಿ ಪರೀಕ್ಷೆ’: ಬೆಳಿಗ್ಗೆ 6 ಗಂಟೆಯಿಂದಲೇ ‘ನಮ್ಮ ಮೆಟ್ರೋ’ ಸಂಚಾರ ಆರಂಭ
ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ: ಮಿಸ್ಟರ್ ಸಿದ್ದರಾಮಯ್ಯ ಧೈರ್ಯವಿದ್ದರೆ ತನಿಖೆ ನಡೆಸಿ – HDK ಸವಾಲ್