ಹಾವೇರಿ: ಕಾಂಗ್ರೆಸ್ ಪಕ್ಷ ಹುಟ್ಟಿದ್ದೇ ಸುಳ್ಳಿನಿಂದ ಮಹಾತ್ಮಾ ಗಾಂಧಿಯವರು ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸುವಂತೆ ಹೇಳಿದ್ದರು. ಇವರು ಕಾಂಗ್ರೆಸ್ ನ್ನು ವಿಸರ್ಜಿಸದೆ ಸುಳ್ಳು ಹೇಳಿಕೊಂಡೆ ಬರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ನದಿ ಹರಳಹಳ್ಳಿಯಲ್ಲಿ ಚುನಾವಣಾ ಪ್ರಚಾರಕ್ಕೂ ಮುಂಚೆ ಮಾಧ್ಯಮಗಳಿಗೆ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ನಾಯಕರು ಒಬ್ಬೊಬ್ಬರು ಒಂದೊಂದು ಸುಳ್ಳು ಹೇಳುತ್ತಾರೆ ಎನ್ನುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಕಾಂಗ್ರೆಸ್ ನಿರಂತರವಾಗಿ ಸುಳ್ಳು ಹೇಳುತ್ತಲೇ ಬಂದಿದೆ. ಇಂದಿರಾಗಾಂಧಿಯವರು ಗರೀಬಿ ಹಠಾವೊ ಅಂತ ಹೇಳಿದ್ದರು. ದೇಶದಲ್ಲಿ ಈಗಲೂ ಬಡತನ ಇದೆ. ಅವರು ಸುಳ್ಳು ಹೇಳುತ್ತಾರೆ ಎನ್ನುವುದಕ್ಕೆ ಇಂದೊಂದೆ ಸಾಕ್ಷಿ ಸಾಕು ಎಂದು ಹೇಳಿದರು.
ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ದವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ. ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.
ಇಂದು ದೇಶದಲ್ಲಿ ದಾಖಲೆಯ ‘ಬಿಸಿಲ ತಾಪಮಾನ’: ಗುಲ್ಬರ್ಗದಲ್ಲಿ ‘42.7 ಡಿಗ್ರಿ ಸೆಲ್ಸಿಯಸ್’ ದಾಖಲು