ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸೌಧದ ಮುಂಬಾಗದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸಿದಂತ ವಿಶೇಷ ಚೇತನ ವ್ಯಕ್ತಿಗೆ ಮಾನವೀಯ ನೆರವು ನೀಡಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ವಿಶೇಷ ಚೇತನ ಸತ್ಯನಾರಾಯಣ ಅವರು ತಮ್ಮ ಡಯಾಲಿಸಿಸ್ ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಕೊಡಿಸುವಂತೆ ಇಂದು ತಮ್ಮಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಮನವಿ ಮಾಡಿದರು ಅಂತ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಅವರ ಮನವಿಯನ್ನು ಸ್ವೀಕರಿಸಿದಂತ ನಾನು ಅರ್ಜಿ ಪರಿಶೀಲಿಸಿ, ಚಿಕಿತ್ಸೆಗೆ ಆದಷ್ಟು ಶೀಘ್ರವೇ ನೆರವು ನೀಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರ ಡಯಾಲಿಸಿಸ್ ಚಿಕಿತ್ಸೆಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುತ್ತದೆ ಅಂತ ಹೇಳಿದ್ದಾರೆ.
ವಿಶೇಷ ಚೇತನ ಸತ್ಯನಾರಾಯಣ ಅವರು ತಮ್ಮ ಡಯಾಲಿಸಿಸ್ ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಕೊಡಿಸುವಂತೆ ಇಂದು ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ @siddaramaiah ಅವರ ಬಳಿ ಮನವಿ ಮಾಡಿದರು.
ಅರ್ಜಿ ಪರಿಶೀಲಿಸಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಆದಷ್ಟು ಶೀಘ್ರ ನೆರವು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ… pic.twitter.com/DtOzuVNiPg— CM of Karnataka (@CMofKarnataka) February 8, 2024
ರಾಯಚೂರಿನ ಶುಶಾಂತ್ ಗೆ ಸಿಎಂ ಸಿದ್ಧರಾಮಯ್ಯ ಆರ್ಥಿಕ ನೆರವು
ರಾಯಚೂರಿನ ಮೂರು ವರ್ಷದ ಶುಶಾಂತ್ ಥಲೆಸ್ಸೆಮಿಯಾ ಕಾಯಿಲೆ ಗೆ ತುತ್ತಾಗಿದ್ದಾನೆ. ಈತನನ್ನು ಜನಸ್ಪಂದನ ಕಾರ್ಯಕ್ರಮಕ್ಕೆ ಕರೆತಂದ ತಾಯಿ ಲಲಿತಾ ಅವರು ಆರ್ಥಿಕ ಸಹಾಯವನ್ನು ಕೋರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಮುಖ್ಯಮಂತ್ರಿಗಳು ಪರಿಹಾರ ನಿಧಿಯಿಂದ ನೆರವು ಒದಗಿಸಲಾಗುವುದು ಎಂದು ಅರ್ಜಿಯನ್ನು ಸ್ವೀಕರಿಸಿ ಭರವಸೆ ನೀಡಿದರು.
ವಿದ್ಯಾರ್ಥಿಗಳೇ ‘ಎಕ್ಸಾಂ ಫೇಲ್’ ಆದ್ರೂ ತಲೆ ಕೆಡಿಸಿಕೊಳ್ಳಬೇಡಿ: ‘SSLC, ದ್ವಿತೀಯ PUC’ ಮಕ್ಕಳಿಗೆ ಗುಡ್ ನ್ಯೂಸ್
BREAKING NEWS: ‘ಮ್ಯಾನ್ಮಾರ್’ ಜೊತೆಗಿನ ‘ಮುಕ್ತ ಸಂಚಾರ ವ್ಯವಸ್ಥೆ’ಯನ್ನು ರದ್ದುಗೊಳಿಸಿದ ‘ಭಾರತ’