ನವದೆಹಲಿ: ನವೆಂಬರ್ 3 ರಂದು ನಡೆಯಲಿರುವ ವಿಧಾನಸಭಾ ಉಪಚುನಾವಣೆಯ ಪ್ರಚಾರದ ಅಂತಿಮ ದಿನವಾದ ಅಕ್ಟೋಬರ್ 31 ರಂದು ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹರಿಯಾಣದ ಆದಂಪುರದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ನವೆಂಬರ್ 1 ರಂದು ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಬಿಜೆಪಿ ರ್ಯಾಲಿಯನ್ನು ಆಯೋಜಿಸಲಿದ್ದಾರೆ ಎನ್ನಲಾಗುತ್ತಿದೆ.
ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ನಾಳೆ ಮಧ್ಯಾಹ್ನ ರೋಡ್ ಶೋ ನಡೆಸಲಿದ್ದಾರೆ. ಇದು ಬಾಲ್ಸಾಮಂಡ್ ಸೇರಿದಂತೆ ಹಲವು ಗ್ರಾಮಗಳಲ್ಲಿ ನಡೆಯಲಿದೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.
ಇಂದು ಪಂಜಾಬ್ ಕ್ಯಾಬಿನೆಟ್ನಲ್ಲಿ ಸಚಿವರಾಗಿರುವ ಗುರ್ಮೀತ್ ಸಿಂಗ್ ಮೀಟ್ ಹೇಯರ್ ಆದಂಪುರದಲ್ಲಿ ರೋಡ್ಶೋ ನಡೆಸಿ ಪ್ರಚಾರ ನಡೆಸಿದರು.
ಮಾಜಿ ಮುಖ್ಯಮಂತ್ರಿ ಭಜನ್ ಲಾಲ್ ಅವರ ಕಿರಿಯ ಪುತ್ರ ಕುಲದೀಪ್ ಬಿಷ್ಣೋಯ್ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಆಗಸ್ಟ್ನಲ್ಲಿ ಕಾಂಗ್ರೆಸ್ನಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.