ಕಾರ್ಯಕರ್ತರ ಸಮಸ್ಯೆಗಳಿಗೆ ಕಿವಿಯಾದ ಸಿಎಂ: ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು : ಯಾವುದೇ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆದಿದ್ದ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರಿಗೆ ಭರವಸೆ ನೀಡಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶನಿವಾರ ನಡೆದ “ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ” (ಅಹವಾಲು ಸ್ವೀಕಾರ) ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಕಲಚೇತನರ ಬಳಿಗೆ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿಗಳು “ಕಾರ್ಯಕರ್ತರ ಎಲ್ಲಾ ಅಹವಾಲುಗಳನ್ನು ವಿಂಗಡಿಸಿ ನನಗೆ ನೀಡಬೇಕು” … Continue reading ಕಾರ್ಯಕರ್ತರ ಸಮಸ್ಯೆಗಳಿಗೆ ಕಿವಿಯಾದ ಸಿಎಂ: ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚನೆ