ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ಬಗ್ಗೆ ತನಿಖೆ ನಡೆಸುವುದಾಗಿ ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಲಾಗಿತ್ತು. ಈಗ ಮುಂದುವರೆದ ಭಾಗವಾಗಿ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಕಾರ್ಯಗಳಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದು, ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಸಚಿವರನ್ನ ಒಳಗೊಂಡ ಸಮಿತಿ ರಚಿಸಿ ಆದೇಶಿಸಲಾಗಿದೆ ಎಂದಿದ್ದಾರೆ.
ವಿವಿಧ ಹಗರಣಗಳ ಪ್ರಗತಿ, ಸಮನ್ವಯ ಸಮಿತಿಯ ಅಧ್ಯಕ್ಷರನ್ನಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ನೇಮಿಸಲಾಗಿದೆ. ಸದಸ್ಯರನ್ನಾಗಿ ಸಚಿವ ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಅವರನ್ನು ನೇಮಕ ಮಾಡಲಾಗಿದೆ.
ಈ ಸಚಿವರ ಸಮಿತಿಯು ಮುಂದಿನ ಎರಡು ತಿಂಗಳಲ್ಲಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೋರಿದ್ದಾರೆ.
BREAKING: ಜ್ಯೂನಿಯರ್ NTR-ಜಾನ್ವಿ ಕಪೂರ್ ಅಭಿನಯದ ‘ದೇವರ ಚಿತ್ರ’ದ ಟ್ರೈಲರ್ ಬಿಡುಗಡೆ | Devara Trailer Out
‘ಇಸ್ರೇಲ್’ನ ‘ಡೆಲ್ಟಾ ಗಲಿಲ್’ ಜತೆ ಭಾರತದಲ್ಲಿ ಕಾರ್ಯತಂತ್ರ ಪಾಲುದಾರಿಕೆ ಘೋಷಿಸಿದ ‘ರಿಲಯನ್ಸ್ ರೀಟೇಲ್’