ಬೆಂಗಳೂರು: ರಾಷ್ಟ್ರೀಯ ಯುವ ಜನೋತ್ಸವದ ಲೋಗೋ, ಮಸ್ಕಟ್ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣ ಗೌಡ ಅವರು ಬಿಡುಗಡೆಗೊಳಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಲೋಗೋ, ಮಸ್ಕಟ್ನ್ನು ಬಿಡುಗಡೆಗೊಳಿಸಲಾಯಿತು. ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ವರ್ಚುವಲ್ ಮೂಲಕ ಭಾಗಿಯಾಗಿದ್ದರು.ಲೋಗೋ ಬಿಡುಗಡೆ ಬಳಿಕ ಅನುರಾಗ್ ಸಿಂಗ್ ಠಾಕೂರ್ ನೇತೃತ್ವದಲ್ಲಿ ಸ್ಟೀರಿಂಗ್ ಕಮಿಟಿ ಸಭೆ ನಡೆಸಲಾಯಿತು.
ರಾಷ್ಟ್ರೀಯ ಯುವ ಜನೋತ್ಸವ ಯಶಸ್ವಿಗೊಳಿಸುವ ಸಂಬಂಧಿಸಿದಂತೆ ಉದ್ಘಾಟನೆ, ಸಿದ್ಧತೆ ಸೇರಿದಂತೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.ಜನವರಿ 12-16 ರವರೆಗೂ ಹುಬ್ಬಳ್ಳಿ- ಧಾರವಾಡದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.