ಉತ್ತರ ಕನ್ನಡ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆಯವರು ಏಕವಚನ ಪದ ಬಳಕೆ ಮಾಡಿ ವಾಗ್ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಅನಂತ್ ಕುಮಾರ್ ಹೆಗಡೆ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು ಸಿದ್ದರಾಮಯ್ಯನವರು ಸಂಸ್ಕೃತಿಯ ಕುರಿತು ನನ್ನೆದುರು ಬಂದು ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಏಕವಚನ ಪದವಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಂಸ್ಕೃತ ಬಗ್ಗೆ ಸಿಎಂ ನನ್ನೆದುರು ಬಂದು ಮಾತನಾಡಲಿ ಇದು ನನ್ನ ವೈಯಕ್ತಿಕ ಹೇಳಿಕೆ ಪಕ್ಷದ ಹೇಳಿಕೆಯಲ್ಲ. ಬಿವೈ ವಿಜಯೇಂದ್ರ ಸರಿಯಾಗಿ ಹೇಳಿದ್ದಾರೆ ಎಂದು ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಮೋದಿ ಬಿಎಸ್ ವೈ ಬಗ್ಗೆ ಹಗುರಾಗಿ ಮಾತನಾಡುತ್ತಾರೆ. ನಮ್ಮ ದೇಗುಲದ ಬಗ್ಗೆ ಕೀಳಾಗಿ ಮಾತನಾಡುವುದು ಏಕೆ?ನಮ್ಮ ಪ್ರಧಾನಿ ಅಮಿತ್ ಶಾ ಬಗ್ಗೆ ಏನೆಲ್ಲಾ ಹೇಳಿದ್ದಾರೆ ಯಾರ್ಯಾರು ಏನೇನು ಮಾತನಾಡಿದ್ದಾರೆಂದು ಹೇಳಬೇಕಾ? ಮೋದಿಗೆ ಸಿದ್ದರಾಮಯ್ಯ ಮಾಸ್ ಮರ್ಡರ್ ಅಂದಿದ್ದರು ಕಾಂಗ್ರೆಸ್ ಸಿದ್ದರಾಮಯ್ಯ ಹರಿಗಿಲ್ಲದ ಸಾಧ್ಯತೆ ನಮಗ್ಯಾಕೆ? ಎಂದು ಕಿಡಿಕಾರಿದ್ದಾರೆ.
ಇನ್ನು ಅನಂತ್ ಕುಮಾರ್ ಹೆಗಡೆ ಅವರು ತಮ್ಮ ಆರೋಗ್ಯದ ಕಡೆ ಗಮನ ಹರಿಸಲಿ ಎಂದು ಡಿಕೆ ಶಿವಕುಮಾರ್ ಹೇಳಿಕೆಗೆ ಅನಂತ್ ಕುಮಾರ್ ಟಾಂಗ್ ನೀಡಿದ್ದು, ನನ್ನ ಆರೋಗ್ಯ ತುಂಬಾ ಚೆನ್ನಾಗಿದೆ. ಯಾವುದೇ ಸಂಶಯ ಬೇಡ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ. ಟಿಕೆಟ್ ಬಗ್ಗೆ ನನಗೆ ಚಿಂತೆ ಆಗಬೇಕು ಆದರೆ ಬೇರೆಯವರಿಗೆ ನನ್ನ ಟಿಕೆಟ್ ಚಿಂತೆ ಯಾಕೆ? ಎಂದು ಅನಂತ್ ಕುಮಾರ್ ಹೆಗಡೆ ಪ್ರಶ್ನೆಸಿದ್ದಾರೆ.
ಸಂಸದರ ಹೇಳಿಕೆ ಸಮರ್ಥಿಸಿಕೊಳ್ಳಲ್ಲ : ಸಿಟಿ ರವಿ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕ ಸಿ ಟಿ ರವಿ ಪ್ರತಿಕ್ರಿಯೆ ನೀಡಿದ್ದು, ಸಂಸದ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆಯನ್ನು ನಾನು ಸಮರ್ಥಿಸುವುದಿಲ್ಲ ಎಂದು ತಿಳಿಸಿದರು.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ವಿರುದ್ಧ ಏಕವಚನ ಪದ ಬಳಕೆಗೆ ಅಸಮಾಧಾನ ಹಿರಿಯರಿಗೆ ಮತ್ತು ಆಸ್ಥಾನಕ್ಕೆ ಗೌರವ ಕೊಡಬೇಕು.ಅನಂತ್ ಕುಮಾರ್ ಹೇಳಿಕೆಯನ್ನು ನಾನು ಸಮರ್ಥಿಸುವುದಿಲ್ಲ ಎಂದು ಚಿಕ್ಕಮಗಳೂರಲ್ಲಿ ಮಾಜಿ ಸಚಿವ ಸಿಟಿ ರವಿ ಹೇಳಿಕೆ ನೀಡಿದ್ದಾರೆ. ಏಕವಚನದಲ್ಲಿ ಮಾತನಾಡಿರುವುದನ್ನು ನಾನು ಸಮರ್ಥಿಸುವುದಿಲ್ಲ ದೇಗುಲ ಗಂಸ ಮಾಡಿ ಮಸೀದಿ ನಿರ್ಮಿಸಿದ್ದು ನಿಜ ಎಂದು ಅವರು ಹೇಳಿದರು.
ಲೋಕಸಭಾ ಟಿಕೆಟ್ ಬಗ್ಗೆ ನಿರ್ಧಾರ ಮಾಡುವುದು ಹೈಕಮಾಂಡ್, ಟಿಕೆಟ್ ಕುರಿತಂತೆ ಪಕ್ಷ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತದೆ. ಯಾರೇ ಅಭ್ಯರ್ಥಿಯಾದ ನಾವು ಅವರಿಗೆ ಬೆಂಬಲ ನೀಡುತ್ತೇವೆ. ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗುವುದು ನಿಶ್ಚಿತ. ಅಭಿವೃದ್ಧಿ ಮತ್ತು ದೇಶದ ಭದ್ರತೆಯನ್ನು ಮುಂದಿಟ್ಟು ಮತ ಕೇಳುತ್ತೇವೆ ಎಂದು ಮಾಜಿ ಶಾಸಕ ಸಿ ಟಿ ರವಿ ತಿಳಿಸಿದರು.