ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿಯ ಜೊತೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಾತ್ಯಾತೀತ ಪಕ್ಷವಾಗಿ ಇದೀಗ ಜೆಡಿಎಸ್ ಪಕ್ಷ ಉಳಿದಿಲ್ಲ ಎಂಬ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ರಾಜ್ಯದ ಅಭಿವೃದ್ಧಿ ಕುಂಠಿತದ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.
ಜೆಡಿಎಸ್ ಜಾತ್ಯಾತೀತ ಪಕ್ಷವಾಗಿ ಉಳಿದಿಲ್ಲ ಎಂಬ ಸಿಎಂ, ಡಿಸಿಎಂ, ಸಚಿವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಜಾತ್ಯಾತೀತ ಅನ್ನೋದು ಪ್ರಶ್ನೆ ಅಲ್ಲ. ಕರ್ನಾಟಕದಲ್ಲಿ ಕನ್ನಡಿಗರು, ಜನರು ನೋವುಗಳನ್ನ ಅನುಭವಿಸುತ್ತಿದ್ದಾರೆ. ಅಭಿವೃದ್ಧಿ ಸಂಪೂರ್ಣವಾಗಿ ಕುಂಠಿತಗೊಂಡಿದೆ. ಒಐಂಗಳಿಗೆ ಕರೆ ಮಾಡಿ ಕೇಳಿ ಕ್ಷೇತ್ರಗಳಿಗೆ ಅನುದಾನ ಕೊಡೋಕೆ ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ. ಇದರ ಬಗ್ಗೆ ಮೊದಲು ಕಾಂಗ್ರೆಸ್ ಅವರು ಉತ್ತರ ಕೊಡಲಿ ಅಂತ ವಾಗ್ದಾಳಿ ನಡೆಸಿದರು.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ದಿ ಕುಂಠಿತವಾಗಿ ಸಿಎಂ, ಡಿಸಿಎಂ, ಸಚಿವರು ಇದರ ಬಗ್ಗೆ ಮೊದಲು ಉತ್ತರ ಕೊಡಲಿ. ಆಮೇಲೆ ಜೆಡಿಎಸ್ ಜಾತ್ಯಾತೀತ ಪಕ್ಷ ಅಲ್ಲ ಅನ್ನೋ ಬಗ್ಗೆ ಮಾತಾಡಲಿ ಅಂತ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಜನರೇ ಮುಂದಿನ ದಿನಗಳಲ್ಲಿ ಕಾಂಗ್ರೆಸ್ಗೆ (Congress) ಕರ್ನಾಟಕದ ಜನತೆಯೇ ಉತ್ತರ ಕೊಡ್ತಾರೆ. 28 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಗೆ ಕರ್ನಾಟಕದ ಜನತೆ ಆಶೀರ್ವಾದ ಮಾಡ್ತಾರೆ ಅಂತ ಕಾಂಗ್ರೆಸ್ ಗೆ ಮನವರಿಗೆ ಆಗಿದೆ. ಹೀಗಾಗಿ ಹೀಗೆಲ್ಲ ಮಾತಾಡ್ತಾ ಇದ್ದಾರೆ. ಇದರ ಬಗ್ಗೆ ನಾನು ಚರ್ಚೆ ಮಾಡೊಲ್ಲ ಅಂತ ಸಿಎಂ, ಡಿಸಿಎಂ, ಸಚಿವರ ವಿರುದ್ಧ ಕಿಡಿಕಾರಿದರು.