ಬೆಂಗಳೂರು:ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ಲೋಕಸಭೆ ಚುನಾವಣೆ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭಾ ಚುನಾವಣೆ ನಡೆಯಲಿದೆ ಎಂದಿದ್ದಾರೆ.ಇದರ ಬಗ್ಗೆ ಅನುಮಾನ ಬೇಡ.ನಮ್ಮ ಸರ್ಕಾರ ಬಲಿಷ್ಠವಾಗಿದೆ. ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ನಮ್ಮ ರಾಜ್ಯದ ಮುಖ್ಯಮಂತ್ರಿ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ನಾವಿಬ್ಬರು ಸೇರಿ ಒಟ್ಟಿಗೆ ಚುನಾವಣೆ ಮಾಡುತ್ತೇವೆ.ಆದ್ರೆ, ಅವರ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ, ಅದರಲ್ಲಿ ಅನುಮಾನ ಬೇಡ ” ಎಂದು ಸ್ಪಷ್ಟಪಡಿಸಿದರು.
ಈ ಹಿಂದೆ ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದರು.ನಂತರ ಅವರ ಮನವೊಲಿಸಿ ಡಿಸಿಎಂ ಪೋಸ್ಟ್ ನೀಡಲಾಯಿತು. ಈ ಮಧ್ಯೆ ಸಿದ್ದರಾಮಯ್ಯ ಪುತ್ರ ಯತೀಂದ್ರ ರವರು ಈ ಸಲ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು