ಬೆಂಗಳೂರು: ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರಕ್ಕೆ ಇಂದು ಜಾತಿಗಣತಿ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಇಂತಹ ಜಾತಿಗಣತಿ ವರದಿಯನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ವೀಕರಿಸಿದರು.
ಇಂದು ವಿಧಾನಸೌಧಕ್ಕೆ ತೆರಳಿದಂತ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು, ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಜಾತಿಗಣತಿ ವರದಿಯನ್ನು ಸಲ್ಲಿಸಿದರು. ತೀವ್ರ ವಿರೋಧದ ನಡುವೆಯೂ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಾತಿಗಣತಿ ವರದಿಯನ್ನು ಸ್ವೀಕರಿಸಿದರು.
ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲೇ ಇಂದು ಜಯಪ್ರಕಾಶ್ ಹೆಗ್ಡೆ ಅವರು ಜಾತಿಗಣತಿ ವರದಿಯನ್ನು ಸಿಎಂ ಸಿದ್ಧರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.
ಜಾತಿಗಣತಿ ವರದಿಯಲ್ಲಿ ಏನಿದೆ.?
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಸಿರುವಂತ ಜಾತಿಗಣತಿ ವರದಿಯಲ್ಲಿ ಜಾತಿವಾರು ಸಂಖ್ಯೆಯನ್ನು ನಮೂದಿಸಲಾಗಿದೆ ಎನ್ನಲಾಗುತ್ತಿದೆ.
ಈ ವರದಿಯಲ್ಲಿ ಎಸ್ಸಿ, ಎಸ್ಟಿ ಹೊರತುಪಡಿಸಿ ಜಾತಿವಾರು ಲಕ್ಷಣಗಳನ್ನು ಸಮೀಕ್ಷೆ ಮಾಡಿ ನೀಡಲಾಗಿದೆ. ಎಸ್ಸಿ ವರ್ಗದ ಪ್ರಮುಖ ಲಕ್ಷಣಗಳು ವರದಿಯಲ್ಲಿವೆ ಎನ್ನಲಾಗುತ್ತಿದೆ.
ಇದಲ್ಲದೇ ವಿಧಾನಸಭಾ ಕ್ಷೇತ್ರವಾರು ಸಮೀಕ್ಷೆಯ ಸೇರಿದಂತೆ ರಾಜ್ಯದ ವಿವಿಧ ಜಾತಿಗಳ ಬಗ್ಗೆ ವರದಿಯಲ್ಲಿ ಮಹತ್ವದ ಅಂಶಗಳನ್ನು ವಿವರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ವರದಿ ಬಹಿರಂಗಗೊಂಡ ನಂತ್ರ ಖಚಿತ ಮಾಹಿತಿ ಹೊರಬೀಳಬೇಕಿದೆ.
ಪಾಕಿಸ್ತಾನದ ಪರ ಘೋಷಣೆ ಕೂಗಿರುವವರ ವಿರುದ್ಧ ಕಾನೂನು ರೀತ್ಯಾ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್
2008ರಲ್ಲಿ ‘ಚಿನ್ನಸ್ವಾಮಿ’ ಕ್ರೀಡಾಂಗಣದಲ್ಲಿ ‘ಬಾಂಬ್’ ಇಟ್ಟವರೇ ಇಂದು ಪಾಕ್ ಪರ ಘೋಷಣೆ ಕೂಗಿದ್ದಾರೆ :ಮುನಿರತ್ನ ಆರೋಪ