ಬೆಂಗಳೂರು: ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದ ಹಿನ್ನಲೆಯಲ್ಲಿ ನಾಳೆಯ ವಿಧಾನಮಂಡಲದ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಗಿದೆ.
ಇಂದು ಶಾಸಕ ವೆಂಕಟಪ್ಪ ನಾಯಕ ಅವರ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂತಾಪ ನುಡಿಗಳನ್ನು ಆಡಿದಂತ ಅವರು, ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆಯೇ ಹೆಚ್ಚೆಚ್ಚು ಕಾಳಜಿ ವಹಿಸಿದ್ದರು. ಸೋತಾಗಲೂ ಜನರ ನಡುವೆಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ವೇರ್ ಹೌಸಿಂಗ್ ಕಾರ್ಪೊರೇಷನ್ ಅಧ್ಯಕ್ಷರಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ಬೇಸರ ನನಗಿದೆ. ಮೊನ್ನೆ ಸ್ವಲ್ಪ ಗುಣಮುಖರಾಗುತ್ತಿದ್ದರು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನುವ ನಿರೀಕ್ಷೆ ಇರಲಿಲ್ಲ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದರು.
ಶಾಸಕರ ನಿಧನದ ಹಿನ್ನೆಲೆಯಲ್ಲಿ ಸೋಮವಾರದ ಅಧಿವೇಶನವನ್ನು ಸಂತಾಪ ಸೂಚಕವಾಗಿ ಒಂದು ದಿನ ಮುಂದೂಡಲಾಗುವುದು. ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಬುಧವಾರಕ್ಕೆ ಅಧಿವೇಶನ ಮುಂದೂಡಬೇಕಾಗುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.
‘ಮಹದಾಯಿ’ ವಿಚಾರದಲ್ಲಿ ದೊಡ್ಡ ಅಪರಾಧ ಮಾಡಿದ್ದು ಕಾಂಗ್ರೆಸ್ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ
‘ಸಿದ್ರಾಮುಲ್ಲಾ ಖಾನ್’ ಹೇಳಿಕೆ: ‘ಸಂಸದ ಅನಂತಕುಮಾರ್ ಹೆಗಡೆ’ ವಿರುದ್ಧ ‘ಸುಮೊಟೋ ಕೇಸ್’ ದಾಖಲು