ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆಗೂಡಿ ರಾಜ್ಯದಲ್ಲಿನ ಬಡವರಿಗೆ ದಾಖಲೆಯ 1000 ಮನೆಗಳ ಹಸ್ತಾಂತರಕ್ಕೆ ಚಾಲನೆ ನೀಡಿದರು. ಈ ಮೂಲಕ ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದರು.
ಇಂದು ಹುಬ್ಬಳ್ಳಿಯಲ್ಲಿ ಫಲಾನುಭವಿಗಳಿಗೆ ಮನೆಗಳ ಹಂಚಿಕೆ ಕಾರ್ಯಕ್ರಮ ನಡೆಯಿತು. ಸಿಎಂ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂಗ 1000 ಮನೆ ಹಸ್ತಾಂತರಕ್ಕೆ ಲೋಕಾರ್ಪಣೆಗೊಳಿಸಿದರು.
1000ಕ್ಕೂ ಹೆಚ್ಚು ಮನೆಗಳನ್ನು ಸಿಎಂ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದರು. ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಿರ್ಮಿಸಲಾಗಿರುವಂತ ಮನೆಗಳು ಇವಾಗಿದ್ದಾವೆ. ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಲಾಗಿರುವ ಮನೆಗಳನ್ನು ಲೋಕಾರ್ಪಣೆಗೊಳಿಸಿದ್ದಾರೆ.
ಇದಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹುಬ್ಬಳ್ಳಿಯಲ್ಲಿ ವಸತಿ ಇಲಾಖೆ ಆಯೋಜಿಸಿರುವ ಐತಿಹಾಸಿಕ 46 ಸಾವಿರ ಮನೆಗಳ ವಿತರಣಾ ಕಾರ್ಯಕ್ರಮಕ್ಕಾಗಿ ಆಗಮಿಸಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿದರು.
ಇದೇ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ AICC ಅಧ್ಯಕ್ಷರೂ, ರಾಜ್ಯಸಭೆಯ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹುಬ್ಬಳ್ಳಿ ಹೋಟೆಲಿನಲ್ಲಿ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.
ಸಚಿವರಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ.ಮಹದೇವಪ್ಪ, ಜಮೀರ್ ಅಹಮದ್ ಖಾನ್, ಮಾಜಿ ಸಚಿವರಾದ ನಾಗೇಂದ್ರ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಇನ್ಮುಂದೆ ಸರ್ಕಾರಿ ಅಧಿಕಾರಿಗಳು ‘ಜನಪ್ರತಿನಿಧಿ’ಗಳ ಪೋನ್ ಕಾಲ್ ಸ್ವೀಕರಿಸಲೇಬೇಕು: ರಾಜ್ಯ ಸರ್ಕಾರ ಖಡಕ್ ಆದೇಶ
CRIME NEWS: ಹಣಕಾಸಿನ ವಿಚಾರಕ್ಕೆ ‘ಅಣ್ಣ-ತಮ್ಮ’ನನ್ನೇ ಕೊಂದ ಸ್ನೇಹಿತ; ಹೊನ್ನಾವರ ಪೊಲೀಸರಿಂದ ಮೂವರು ಅರೆಸ್ಟ್








