Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

08/06/2025 9:16 PM

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಜುಲೈ.27ರ ‘ನೀತಿ ಆಯೋಗದ ಸಭೆ’ ಬಹಿಷ್ಕರಿಸಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ
KARNATAKA

BIG NEWS: ಜುಲೈ.27ರ ‘ನೀತಿ ಆಯೋಗದ ಸಭೆ’ ಬಹಿಷ್ಕರಿಸಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0923/07/2024 9:03 PM

ಬೆಂಗಳೂರು: ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದಂತ ಕೇಂದ್ರ ಬಜೆಟ್ 2024-25ರಲ್ಲಿ ಕರ್ನಾಟಕಕ್ಕೆ ಯಾವುದೇ ಪ್ರಾಧಾನ್ಯತೆಯನ್ನು ನೀಡದೇ, ಕಡೆಗಣಿಸಲಾಗಿದೆ. ಈ ಹಿನ್ನಲೆಯಲ್ಲಿ ಜು.27ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕರೆದಿರುವಂತ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡಿರುವಂತ ಮಾಡಿದಂತ ಅವರು, ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು ಮಂಡಿಸಲಾಗಿರುವ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಅಂತ ವಾಗ್ಧಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ ತಿಂಗಳ 27ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.

ಇಂದು ಮಂಡಿಸಲಾದ 2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರ್ಕಾರದ ಮೇಲಿನ ವಿಶ‍್ವಾಸವೇ ಹೊರಟುಹೋಗಿದೆ. ಬಜೆಟ್ ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸುವ ಸಚಿವರು ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ. ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ -ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ ಅಂತ ಕಿಡಿಕಾರಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲ ಎಂದಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಸೂಚನೆ ಕೂಡಾ ಬಜೆಟ್ ನಲ್ಲಿ ಇಲ್ಲ. ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಸೂಕ್ಷ್ಮವಾಗಿ ಅವಲೋಕಸಿದರೆ ಬಿಜೆಪಿಯನ್ನು ತಿರಸ್ಕರಿಸಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ನರೇಂದ್ರ ಮೋದಿ ಅವರ ಸರ್ಕಾರ ನಿರ್ಧಾರ ಮಾಡಿದಂತಿದೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.

ದೇಶದಲ್ಲಿ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರ್ಕಾರ ಮರೆತಂತಿದೆ. ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ ಅಂತ ತಿಳಿಸಿದ್ದಾರೆ.

ಈ ಅನ್ಯಾಯವನ್ನು ಸಹಿಸಲಾಗದು. ಈ ರೀತಿ ನಿರ್ಲಕ್ಷ್ಯಕ್ಕೊಳಗಾಗಿರುವ ಬಿಜೆಪಿಯೇತರ ಪಕ್ಷಗಳ ಆಡಳಿತದ ರಾಜ್ಯಗಳ ಜೊತೆ ಸೇರಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಸೇಡಿನ ರಾಜಕಾರಣದ ವಿರುದ್ಧ ಹೋರಾಟ ನಡೆಸಲಾಗುವುದು. ಈ ಹೋರಾಟದಲ್ಲಿ ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ರಾಜ್ಯದ ಜನತೆ ನಮ್ಮ ಜೊತೆ ನಿಲ್ಲಲಿದ್ದಾರೆ ಎಂಬ ಭರವಸೆ ನನಗಿದೆ ಎಂಬುದಾಗಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ @nsitharaman ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು ಮಂಡಿಸಲಾಗಿರುವ ಕೇಂದ್ರ @BJP4India ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ.…

— CM of Karnataka (@CMofKarnataka) July 23, 2024

ಮಂಡ್ಯದಲ್ಲಿ 1 ಲಕ್ಷ ರೂ ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ RFO ಹಾಗೂ ವಾಹನ ಚಾಲಕ

‘ಶಿವಮೊಗ್ಗ ಜಿಲ್ಲೆ’ಯಲ್ಲೊಂದು ‘ಬಹುದೊಡ್ಡ ಹಗರಣ’: ‘ಸಹಕಾರ ಸಂಘ’ಕ್ಕೆ ಕಟ್ಟಿದ ಹಣ ‘ಕಾರ್ಯದರ್ಶಿ ಪಂಗನಾಮ’

Share. Facebook Twitter LinkedIn WhatsApp Email

Related Posts

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

08/06/2025 9:16 PM1 Min Read

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM3 Mins Read

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM3 Mins Read
Recent News

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

08/06/2025 9:16 PM

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM

ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 423ಕ್ಕೆ ಏರಿಕೆ

08/06/2025 7:45 PM
State News
KARNATAKA

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

By kannadanewsnow0908/06/2025 9:16 PM KARNATAKA 1 Min Read

ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾಗದಂತ ಕಾಲ್ತುಳಿತ ದುರಂತವು ತುಂಬಾ ನೋವು ತಂದಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವುಕ ನುಡಿಯಾಡಿದ್ದಾರೆ.…

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM

ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 423ಕ್ಕೆ ಏರಿಕೆ

08/06/2025 7:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.