Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

14/03/2026 6:28 PM

BREAKING : ಹೋಟೆಲ್ ಮಾಲೀಕರಿಗೆ ಬಿಗ್ ರಿಲೀಫ್ ; 29 ರಾಜ್ಯಗಳಿಗೆ ‘ವಾಣಿಜ್ಯ ಸಿಲಿಂಡರ್’ಗಳ ವಿತರಣೆ ಆರಂಭ

14/03/2026 6:16 PM

‘ತಂದೆಯ ಸಂಪೂರ್ಣ ಆಸ್ತಿ ಮಗನಿಗೆ ಸೇರಿದ್ದಲ್ಲ’ ; ಹೈಕೋರ್ಟ್ ಮಹತ್ವದ ತೀರ್ಪು

14/03/2026 6:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ
KARNATAKA

ರಾಜ್ಯದಲ್ಲಿ ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow5706/10/2025 6:00 AM

ಬೆಂಗಳೂರು : ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ. ನಮ್ಮಲ್ಲಿ ಅನೇಕ ಜಾತಿ, ಅನೇಕ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು ಎಂದರು.

ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ ನಂಬಿಕೆ – ಬದ್ಧತೆ ಇಟ್ಟುಕೊಂಡಿದ್ದೇನೆ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದು ಹೇಳಿದ್ದಾರೆ.

ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ.ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ ಎಂದರು.

ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದೆ.
ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯವಾದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ. ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಆಗುತ್ತೇವೆ ಎಂದರು.

ನಮ್ಮ ಮೆಟ್ರೋಗೆ "ಬಸವ ಮೆಟ್ರೋ" ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ "ಬಸವ ಮೆಟ್ರೋ" ಎಂದು ಘೋಷಿಸಿ ಬಿಡುತ್ತಿದ್ದೆ.

ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ… pic.twitter.com/k5yUD34UaA

— Siddaramaiah (@siddaramaiah) October 5, 2025

CM Siddaramaiah announces establishment of 'Vachana University' in the state next year
Share. Facebook Twitter LinkedIn WhatsApp Email

Related Posts

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

14/03/2026 6:28 PM2 Mins Read

BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ

14/03/2026 5:15 PM1 Min Read

ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ

14/03/2026 4:50 PM2 Mins Read
Recent News

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

14/03/2026 6:28 PM

BREAKING : ಹೋಟೆಲ್ ಮಾಲೀಕರಿಗೆ ಬಿಗ್ ರಿಲೀಫ್ ; 29 ರಾಜ್ಯಗಳಿಗೆ ‘ವಾಣಿಜ್ಯ ಸಿಲಿಂಡರ್’ಗಳ ವಿತರಣೆ ಆರಂಭ

14/03/2026 6:16 PM

‘ತಂದೆಯ ಸಂಪೂರ್ಣ ಆಸ್ತಿ ಮಗನಿಗೆ ಸೇರಿದ್ದಲ್ಲ’ ; ಹೈಕೋರ್ಟ್ ಮಹತ್ವದ ತೀರ್ಪು

14/03/2026 6:06 PM

BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ

14/03/2026 5:15 PM
State News
KARNATAKA

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

By kannadanewsnow0914/03/2026 6:28 PM KARNATAKA 2 Mins Read

ಚಿಕ್ಕೋಡಿ: ಇಂದಿನ ಕಾಲದಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ, ಕೆಲವೊಮ್ಮೆ ಪ್ರಕೃತಿ ಅಥವಾ ಅನಿವಾರ್ಯ ಪರಿಸ್ಥಿತಿಗಳು ನಮ್ಮನ್ನು ಮತ್ತೆ ಹಳೆಯ ಪದ್ಧತಿಗೆ…

BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ

14/03/2026 5:15 PM

ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ

14/03/2026 4:50 PM

‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ದ ಅಂತಿಮ ಫಲಿತಾಂಶ ಪ್ರಕಟ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’

14/03/2026 4:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.