ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಾಗಲಕೋಟೆಯಲ್ಲಿ ಅಪಘಾತದಲ್ಲಿ ಮೃತಪಟ್ಟಂತ ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡೋದಾಗಿ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು ವಿತರಿಸಿ, ಒಂದೇ ದಿನ 697.27 ಕೋಟಿ ರೂ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ದಾರಿಯುದ್ದಕ್ಕೂ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೂಮಳೆಗರೆದು ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಡಿಸಿಎಂ ಶಿವಕುಮಾರ್, ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಕೃಷ್ಣ ಭೈರೇಗೌಡ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರುಗಳು ಮತ್ತು ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
BREAKING: ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣ: ವಿಚಾರಣೆಗೆ ಪಾಟ್ನಾದ ED ಕಚೇರಿಗೆ ಹಾಜರಾದ ಲಾಲು ಯಾದವ್
BREAKING: ಮಂಡ್ಯದಲ್ಲಿ ಉದ್ರಿಕ್ತರಿಂದ ಕಲ್ಲು ತೂರಾಟ: ಸಿಎಂ ಸಿದ್ಧರಾಮಯ್ಯ, ಶಾಸಕ ಗಣಿಗ ರವಿ ಬ್ಯಾನರ್ ಹರಿದು ಆಕ್ರೋಶ