ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕಲಬುರಗಿಯಲ್ಲಿ 78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,
ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡಲು, ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕಳೆದ ಎರಡು ವರ್ಷದಿಂದ ‘ಅಕ್ಷರ ಆವಿಷ್ಕಾರ’ ಕಾರ್ಯಕ್ರಮ ರೂಪಿಸಿ, ಇದುವರೆಗೆ 6,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನಗಳನ್ನು ಖರ್ಚು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಟ್ಟು 5,267 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಭರ್ತಿ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಈ ವರ್ಷದಿಂದ 10ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿಗಳನ್ನು ಪ್ರಾರಂಭಿಸುತ್ತಿದ್ದೇವೆ.
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಟ್ಟು 350 ಕೆ.ಪಿ.ಎಸ್. ಶಾಲೆಗಳನ್ನು ಮುಂದಿನ ಎರಡು ವರ್ಷಗಳಲ್ಲಿ ನಿರ್ಮಿಸುವ ಗುರಿ ಹೊಂದಿದ್ದೇವೆ. ಇದಲ್ಲದೆ ಉನ್ನತ ಶಿಕ್ಷಣಕ್ಕೂ ಕಳೆದ ಎರಡು ವರ್ಷಗಳಲ್ಲಿ 250 ಕೋಟಿ ರೂ.ಗಳನ್ನು ಒದಗಿಸಿದ್ದೇವೆ.
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಕುಸಿತ ಕಂಡ ಹಿನ್ನೆಲೆಯಲ್ಲಿ ಖಾಲಿ ಇರುವ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಸಮಾಜ ಕಲ್ಯಾಣ, ಬಿಸಿಎಂ ಇಲಾಖೆ ಹಾಗೂ ಅಲ್ಪಸಂಖ್ಯಾತ ಇಲಾಖೆ ವತಿಯಿಂದ ಹೊಸದಾಗಿ ವಸತಿ ಶಾಲೆ ಹಾಗೂ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದರು.
7 ಜಿಲ್ಲೆಗಳಲ್ಲಿ 204 ಕೋಟಿ ರೂ.ವೆಚ್ಚದಲ್ಲಿ ವಸತಿ ಶಾಲೆಗಳ ನಿರ್ಮಾಣ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ತರಬೇತಿ ಕೇಂದ್ರ, ಕಲಬುರಗಿಯಲ್ಲಿ 100 ಕೋಟಿ ವೆಚ್ಚದಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ 220 ಕೋಟಿ ರೂ. ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಕಲಬುರಗಿ ನಗರದ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಕಲ್ಯಾಣ ಕರ್ನಾಟಕದ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯಗೆ ವಿವಿಧ ಪೊಲೀಸ್ ತುಕಡಿಗಳಿಂದ ಗೌರವ ಸಲ್ಲಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡಲು, ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕಳೆದ ಎರಡು ವರ್ಷದಿಂದ ‘ಅಕ್ಷರ ಆವಿಷ್ಕಾರ’ ಕಾರ್ಯಕ್ರಮ ರೂಪಿಸಿ, ಇದುವರೆಗೆ 6,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನಗಳನ್ನು ಖರ್ಚು ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಟ್ಟು 5,267 ಶಿಕ್ಷಕರ ಹುದ್ದೆಗಳು… pic.twitter.com/nBfMQmHXZk
— Siddaramaiah (@siddaramaiah) September 17, 2025
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯಲ್ಲಿ ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದೆ.
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಹೈದ್ರಾಬಾದ್ ನಿಜಾಮರ ಆಳ್ವಿಕೆಯಿಂದ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾದ ಇದು… pic.twitter.com/XwQmwX17tC
— Siddaramaiah (@siddaramaiah) September 17, 2025