ಕೊಪ್ಪಳ: ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಸಿ.ಎಂ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
ಕನಕಗಿರಿ ಉತ್ಸವವನ್ನು ನಿರಂತರವಾಗಿ ನಡೆಸಲು, ಕನಕಗಿರಿಯ ಸರ್ವತೋಮುಖ ಅಭಿವೃದ್ಧಿಗೆ ನಾನು ಮತ್ತು ನಮ್ಮ ಸರ್ಕಾರ ಸದಾ ಬದ್ದವಾಗಿದೆ. ಸರ್ವೋದಯ, ಸರ್ವದರ್ಮ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಈ ದಿಕ್ಕಿನಲ್ಲೇ ನಮ್ಮ ಸರ್ಕಾರ ಮುನ್ನಡೆಯಲಿದೆ. ಕೊಪ್ಪಳ ನನ್ನದೇ ಕ್ಷೇತ್ರ. ಈ ಜಿಲ್ಲೆಯ ಜನರ ಪ್ರೀತಿಗೆ ನಾನು ಸದಾ ಋಣಿ ಎಂದು ಕೃತಜ್ಞತೆ ಸಲ್ಲಿಸಿದರು.
ಶ್ರೀ ವೇದಮೂರ್ತಿ ಭುವನೇಶ್ವರಯ್ಯ ತಾತನವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಉತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರೂ, ಕೊಪ್ಪಳ ಜಿಲ್ಲಾ ಸಚಿವರಾದ ಶಿವರಾಜ್ ತಂಗಡಗಿ ಸಂಗಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಜನಾರ್ಧನರೆಡ್ಡಿ, ದೊಡ್ಡನಗೌಡ ಪಾಟೀಲ್, ಇಕ್ಬಾಲ್ ಅನ್ಸಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.