Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಏಪ್ರಿಲ್ 7 ಕ್ಕೆ `ದ್ವಿತೀಯ ಪಿಯುಸಿ’, ಏ.24ಕ್ಕೆ `SSLC’ ಫಲಿತಾಂಶ ಪ್ರಕಟ.!

04/04/2026 6:01 AM

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್ : ಏ.19,30 ಕ್ಕೆ ಮತದಾನ

04/04/2026 5:59 AM

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

04/04/2026 5:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS: ರಾಜ್ಯದಲ್ಲಿ ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಸಿಎಂ ಸಿದ್ದರಾಮಯ್ಯ ಘೋಷಣೆ
KARNATAKA

BREAKING NEWS: ರಾಜ್ಯದಲ್ಲಿ ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow0918/02/2025 7:27 PM

ಬೆಂಗಳೂರು: ರಾಜ್ಯದಲ್ಲಿ ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಾತಿ ಗಣತಿ ಅನುಷ್ಠಾನಕ್ಕೆ ಸಭೆಯಲ್ಲಿ ಒಕ್ಕೊರಲಿನಿಂದ ಒತ್ತಾಯ ಬಂದ ಸಂದರ್ಭದಲ್ಲಿ ಅದಕ್ಕೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು.

ಸರ್ಕಾರ ಜಾತಿ ಗಣತಿ ಪರವಾಗಿದೆ . ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ.‌ ಮುಂದಿನ ದಿನಗಳಲ್ಲಿ ಅದನ್ನು ಖಂಡಿತವಾಗಿಯೂ ಜಾರಿ ಮಾಡಲಾಗುತ್ತದೆ ಅದರ ಬಗ್ಗೆ ಅನುಮಾನ ಬೇಡ ಎಂದು ತಿಳಿಸಿದರು.

ತಮಿಳು ನಾಡು ಮಾದರಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಭೆ ಆಗ್ರಹಿಸಿದಾಗ 1992 ರ ಇಂದಿರಾ ಸಹಾನಿ ಕೇಸನ್ನು ಉಲ್ಲೇಖಿಸಿ ಮೀಸಲಾತಿ ಶೇಕಡ 50ರಷ್ಟು ಮೀರಬಾರದು ಎನ್ನುವ ಅಂಶವನ್ನು ಸಭೆಗೆ ತಿಳಿಸುತ್ತಾ, ಕಳೆದ ಸರ್ಕಾರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಎಂದು ( EWS) ಮೀಸಲಾತಿ ಕಲ್ಪಿಸಿದ್ದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಸಂವಿಧಾನದ ಆರ್ಟಿಕಲ್ ( 15)(16)ರ ಪ್ರಕಾರ ಮೀಸಲಾತಿ ನೀಡಬೇಕಾಗಿರುವುದು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮಾತ್ರ ನೀಡಬೇಕು ಎಂದಿದೆ. ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು ಸಮಾಜದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲ ವಾಗಿದೆ. ಆ ಪ್ರಕಾರ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು.

ಇಷ್ಟು ವರ್ಷಗಳಾದರೂ ಸಮಾನತೆ ಯಾಕೆ ಬಂದಿರುವುದಿಲ್ಲ ಎಂಬುದು ಮುಖ್ಯ. ಕೆಲವರು ತಪ್ಪು ಗ್ರಹಿಕೆಯಿಂದ ಅದನ್ನು ವಿರೋಧಿಸುತ್ತಿದ್ದಾರೆ ಎಂದರು.

ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಮಹಿಳೆಯರು ಎಲ್ಲರನ್ನೂ ಮುಖ್ಯ ವಾಹಿನಿಗೆ ತರುವುದು ನಮ್ಮ ಸರ್ಕಾರದ ಉದ್ದೇಶ ಅಸಮಾನತೆ ಹೋಗಬೇಕು ಜಾತಿ ವ್ಯವಸ್ಥೆಯಿಂದ ನಿರ್ಮಾಣವಾಗಿರುವ ಅಸಮಾನತೆಯಿಂದ ಬಹು ಸಂಖ್ಯಾತ ಜನ ಅವಕಾಶ ವಂಚಿತರಾಗಿದ್ದಾರೆ ಎಲ್ಲರಿಗೂ ಸಮಾನ ಅವಕಾಶ ನೀಡಬೇಕಿದೆ ತಳ ಸಮುದಾಯವಿರಲಿ, ಮೇಲ್ವರ್ಗವಿರಲಿ ಎಲ್ಲರಿಗೂ ಸಮಾನತೆ ಇರಬೇಕು ಎಂಬ ಅಂಶವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ. ಹಿಂದುಳಿದ ಜಾತಿಗಳಲ್ಲೂ ತಾರತಮ್ಯ ಅಸಮಾನತೆ ಇದೆ ಇದನ್ನು ಒಂದೇ ಬಾರಿಗೆ ಹೋಗಲಾಡಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು.

ಅಲೆಮಾರಿ ಜನಾಂಗಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆ ಪ್ರತಿಕ್ರಿಯಿಸಿ ಅಲೆಮಾರಿ ಆಯೋಗ ರಚನೆಗೆ ಉಂಟಾಗಿರುವ ಸಮಸ್ಯೆಗಳಿಂದಾಗಿ ಆಯೋಗ ರಚನೆ ಸಾಧ್ಯವಾಗಿರುವುದಿಲ್ಲ ಎಂದರು.

ಅಲೆಮಾರಿ ಜನಾಂಗಕ್ಕೆ ಉಚಿತ ಶಿಕ್ಷಣ ಹಕ್ಕು ಒತ್ತಾಯಕ್ಕೆ ಪ್ರತಿಕ್ರಿಯಿಸಿ ಸರ್ಕಾರ ಶಿಕ್ಷಣದ ಹಕ್ಕನ್ನು ನೀಡಿದೆ (RTE) ಅದರ ಪ್ರಕಾರ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಅವಕಾಶ ಸಿಗಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಬಾರಿಯ ಆಯವ್ಯಯದಲ್ಲಿ ಅಲೆಮಾರಿ ಜನಾಂಗಕ್ಕೆ ವಿಶೇಷ ಗಮನ ಹರಿಸುವುದಾಗಿ ತಿಳಿಸಿದರು. ಮಾತ್ರವಲ್ಲ ಅತಿ ಹಿಂದುಳಿದ ವರ್ಗದವರಿಗೂ ಕಾರ್ಯಕ್ರಮಗಳನ್ನು ಈ ಬಾರಿಯ ಆಯವ್ಯಯದಲ್ಲಿ ಅನುಷ್ಠಾನಗೊಳಿಸಲು ಪ್ರಯತ್ನಿಸುವುದಾಗಿ ಹೇಳಿದರು. ಜೊತೆಗೆ ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಹಿಂದುಳಿದ ವರ್ಗಗಳಿಗೆ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ಭರವಸೆ ನೀಡಿದರು.

ವಿಮಾನದಲ್ಲಿ ಪ್ರಯಾಣಿಸಬೇಕೆಂಬ ಮಹಿಳಾ ಕೂಲಿ ಕಾರ್ಮಿಕ ಆಸೆ ಈಡೇರಿಸಿದ ‘ರೈತ’

GOOD NEWS: ರಾಜ್ಯದ ರೈತರಿಗೆ ಗುಡ್ ನ್ಯೂಸ್: ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ – ಸಚಿವ ಕೆ.ಜೆ ಜಾರ್ಜ್

Share. Facebook Twitter LinkedIn WhatsApp Email

Related Posts

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಏಪ್ರಿಲ್ 7 ಕ್ಕೆ `ದ್ವಿತೀಯ ಪಿಯುಸಿ’, ಏ.24ಕ್ಕೆ `SSLC’ ಫಲಿತಾಂಶ ಪ್ರಕಟ.!

04/04/2026 6:01 AM2 Mins Read

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್ : ಏ.19,30 ಕ್ಕೆ ಮತದಾನ

04/04/2026 5:59 AM1 Min Read

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

04/04/2026 5:57 AM2 Mins Read
Recent News

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಏಪ್ರಿಲ್ 7 ಕ್ಕೆ `ದ್ವಿತೀಯ ಪಿಯುಸಿ’, ಏ.24ಕ್ಕೆ `SSLC’ ಫಲಿತಾಂಶ ಪ್ರಕಟ.!

04/04/2026 6:01 AM

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್ : ಏ.19,30 ಕ್ಕೆ ಮತದಾನ

04/04/2026 5:59 AM

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

04/04/2026 5:57 AM

BIG NEWS : `CBSE’ ಶಾಲೆಗಳಲ್ಲಿ 6ನೇ ತರಗತಿಯಿಂದ ತ್ರಿಭಾಷಾ ಸೂತ್ರ ಕಡ್ಡಾಯ : ಹೊಸ ಶೈಕ್ಷಣಿಕ ಬದಲಾವಣೆ ಜಾರಿ

04/04/2026 5:52 AM
State News
KARNATAKA

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಏಪ್ರಿಲ್ 7 ಕ್ಕೆ `ದ್ವಿತೀಯ ಪಿಯುಸಿ’, ಏ.24ಕ್ಕೆ `SSLC’ ಫಲಿತಾಂಶ ಪ್ರಕಟ.!

By kannadanewsnow5704/04/2026 6:01 AM KARNATAKA 2 Mins Read

ಬೆಂಗಳೂರು: ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಬುಧವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆಯು…

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್ : ಏ.19,30 ಕ್ಕೆ ಮತದಾನ

04/04/2026 5:59 AM

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

04/04/2026 5:57 AM

Rain in Karnataka: ಏ.8ರವರೆಗೆ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

04/04/2026 5:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.