Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM

ಹೊರಗಡೆ ಊಟ ಮಾಡಿದ ಮೇಲೆ ನಿದ್ರೆ ಆವರಿಸುತ್ತಿದೆಯೇ? ‘ಫುಡ್ ಕೋಮಾ’ ತಪ್ಪಿಸಲು ಇಲ್ಲಿವೆ 5 ಸರಳ ಸೂತ್ರಗಳು!

07/03/2026 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ‘ಜಾತಿಗಣತಿ ವರದಿ ಜಾರಿ’ಯ ಬಗ್ಗೆ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಘೋಷಣೆ
KARNATAKA

BIG NEWS: ರಾಜ್ಯದಲ್ಲಿ ‘ಜಾತಿಗಣತಿ ವರದಿ ಜಾರಿ’ಯ ಬಗ್ಗೆ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಘೋಷಣೆ

By kannadanewsnow0905/01/2025 8:17 PM

ಬೆಂಗಳೂರು: ನಾನು ಜಾತಿ ಜನಗಣತಿ ಪರವಾಗಿ ಇದ್ದೇನೆ. ಕಾಂತರಾಜ ಅವರ ವರದಿಯನ್ನು ಮುಂದಿನ ಕ್ಯಾಬಿನೆಟ್ ನಲ್ಲಿ ಇಟ್ಟು ಚರ್ಚಿಸುವ ಉದ್ದೇಶ ಕೂಡ ಇದೆ. ನನಗೆ ನನ್ನ ಮುಂದಿನ ದಾರಿಯ ಬಗ್ಗೆ ಸ್ಪಷ್ಟತೆ ಇದೆ. ಬಸವಣ್ಣ-ಅಂಬೇಡ್ಕರ್-ಕನಕದಾಸರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂಬುದಾಗಿ ಜಾತಿ ಗಣತಿ ವರದಿ ಜಾರಿಯ ಬಗ್ಗೆ ಮಹತ್ವದ ಘೋಷಣೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಡಿದ್ದಾರೆ.

ಇಂದು ದಾವಣಗೆರೆಯಲ್ಲಿ ಆಯೋಜಿಸಿದ್ದ 537ನೇ ಕನಕ ಜಯಂತಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದಂತ ಅವರು, ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಹಾಗೂ ಮಹಾನ್ ಸಂತ. ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ ರಹಿತ ಸಮ‌ಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ. ಮನುಕುಲದ ಏಳೆಗೆಗಾಗಿ ಶ್ರಮಿಸಿದ ಅವರು ದಾಸ ಶ್ರೇಷ್ಠರಾದರು ಎಂದರು.

ಶರಣ ಸಾಹಿತ್ಯದಲ್ಲಿ ಅಣ್ಣ ಬಸವಣ್ಣ, ದಾಸ ಸಾಹಿತ್ಯದಲ್ಲಿ ಕನಕದಾಸರು ಅತ್ಯಂತ ಪ್ರಮುಖರು. ಬುದ್ಧನಿಂದ ಕನಕದಾಸರವರೆಗೂ, ಆ ನಂತರವೂ ಬಹಳ ಪುಣ್ಯಾತ್ಮರು ಜಾತಿರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್, ನಾರಾಯಣಗುರು ಮತ್ತು ಕನಕದಾಸರು ಕೂಡ ಜಾತಿ ವ್ಯವಸ್ಥೆ, ವರ್ಣ ವ್ಯವಸ್ಥೆಯ ಕಾರಣಕ್ಕೆ ಅವಮಾನಿತರಾಗಿದ್ದರು. ಯಾರೂ ಜನ್ಮತಃ ದಡ್ಡರಾಗಿರಲು ಸಾಧ್ಯವಿಲ್ಲ. ಕಾಳಿದಾಸರು ಶಾಕುಂತಲಾ ಬರೆದದ್ದು, ವ್ಯಾಸರು ಮಹಾಭಾರತ ಬರೆದದ್ದು, ವಾಲ್ಮೀಕಿ ರಾಮಾಯಣ ಬರೆದದ್ದೇ ಹುಟ್ಟಿನಿಂದ ಯಾರೂ ದಡ್ಡರಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವದಲ್ಲಿ ಒಬ್ಬರಿಗೆ ಒಂದೇ ಮತ. ಎಲ್ಲಾ ಜಾತಿ, ಧರ್ಮ, ಅಂತಸ್ತಿವರಿಗೂ ಒಂದೇ ಮತ. ಈ ಸಮಾನತೆ ಆರ್ಥಿಕವಾಗಿ, ಸಾಮಾಜಿಕವಾಗಿಯೂ ಜಾರಿ ಆಗಬೇಕು. ಆಗ ಮಾತ್ರ ಸಮಸಮಾಜದ ದಿಕ್ಕಿನಲ್ಲಿ ನಾವು ಮುನ್ನಡೆಯಲು ಸಾಧ್ಯ. ಯಾವ ಧರ್ಮದಲ್ಲೂ ಮನುಷ್ಯ ತಾರತಮ್ಯ ಇಲ್ಲ. ಧರ್ಮವನ್ನು ರಾಜಕೀಯವಾಗಿ ಬಳಸಿಕೊಳ್ಳುವವರು ತಮ್ಮ ಲಾಭಕ್ಕಾಗಿ ತಾರತಮ್ಯ, ದ್ವೇಷ ಸೃಷ್ಟಿಸುತ್ತಾರೆ ಎಂದರು.

ಶೋಷಿತ ಸಮುದಾಯಗಳು ಜಾತಿ ಸಮ್ಮೇಳನ ಮಾಡುವುದು ತಪ್ಪಲ್ಲ. ಆದರೆ ಮುಂದುವರೆದ ಜಾತಿಗಳು ಜಾತಿ ಹೆಸರಲ್ಲಿ ಸಮ್ಮೇಳನ ನಡೆಸುವುದು ಸಾಮಾಜಕವಾಗಿ ತಪ್ಪಾಗುತ್ತದೆ. ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಶಕ್ತಿ ಬರುವುದಿಲ್ಲ. ಮನುಷ್ಯ ಧರ್ಮ ಸ್ಥಾಪನೆ ಆಗುವವರೆಗೂ ನಾವೆಲ್ಲರೂ ಶ್ರಮಿಸುತ್ತಲೇ. ನಾನು ಎಲ್ಲಾ ಜಾತಿಯವರನ್ನೂ ಪ್ರೀತಿಸುತ್ತೇನೆ. ಆದರೆ ಜಾತಿ ಮಾಡುವವರನ್ನು ನಾನು ವಿರೋಧಿಸುತ್ತೇನೆಯೇ ಹೊರತು ಅವರನ್ನು ದ್ವೇಷಿಸುವುದಿಲ್ಲ. ಜಾತಿ ಕಾರಣದಿಂದ ಕನಕದಾಸರನ್ನು ಉಡುಪಿ ಮಠದ ಒಳಗೆ ಬಿಡಲಿಲ್ಲ. ಕೊನೆಗೆ ಸ್ವತಃ ಕೃಷ್ಣನೇ ಅವರಿಗೆ ದರ್ಶನ ನೀಡಿದ ಎಂದರು.

ಕನಕದಾಸರ 500ನೇ ಜಯಂತಿಯನ್ನು ನಾನು ಸಾರಿಗೆ ಸಚಿವನಾಗಿದ್ದಾಗ ಆಗಿನ ಎಸ್.ಆರ್.ಬೊಮ್ಮಾಯಿ ಸರ್ಕಾರದಲ್ಲಿ ಆರಂಭಿಸಿದೆವು. ಬಳಿಕ ಇಡೀ ರಾಜ್ಯ ಪ್ರವಾಸ ಮಾಡಿ ಕಾಗಿನೆಲೆ ಗುರುಪೀಠವನ್ನು, ಮಠವನ್ನು ಸ್ಥಾಪಿಸಿದೆ. ಆದ್ದರಿಂದ ಇಡೀ ಸಮುದಾಯ ಒಟ್ಟಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.

ನಾನು ಜಾತಿ ಜನಗಣತಿ ಪರವಾಗಿ ಇದ್ದೇನೆ. ಕಾಂತರಾಜ ಅವರ ವರದಿಯನ್ನು ಮುಂದಿನ ಕ್ಯಾಬಿನೆಟ್ ನಲ್ಲಿ ಇಟ್ಟು ಚರ್ಚಿಸುವ ಉದ್ದೇಶ ಕೂಡ ಇದೆ. ನನಗೆ ನನ್ನ ಮುಂದಿನ ದಾರಿಯ ಬಗ್ಗೆ ಸ್ಪಷ್ಟತೆ ಇದೆ. ಬಸವಣ್ಣ-ಅಂಬೇಡ್ಕರ್-ಕನಕದಾಸರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂಬುದಾಗಿ ಘೋಷಣೆ ಮಾಡಿದರು.

ರಾಜ್ಯದಲ್ಲಿ ‘ಉಚಿತ ಗೋಮಾಳ’ ಒದಗಿಸಲು ನಿಯಮಗಳೇನು.? ಎಷ್ಟು ಹೆಕ್ಟೇರ್ ಇರಿಸಬಹುದು? ಇಲ್ಲಿದೆ ಮಾಹಿತಿ

ರಾಜ್ಯದ `ಕಾರ್ಮಿಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM1 Min Read

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM1 Min Read

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM2 Mins Read
Recent News

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM

ಹೊರಗಡೆ ಊಟ ಮಾಡಿದ ಮೇಲೆ ನಿದ್ರೆ ಆವರಿಸುತ್ತಿದೆಯೇ? ‘ಫುಡ್ ಕೋಮಾ’ ತಪ್ಪಿಸಲು ಇಲ್ಲಿವೆ 5 ಸರಳ ಸೂತ್ರಗಳು!

07/03/2026 9:55 PM

ದುಬೈ-ಅಬುಧಾಬಿ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ; ಪರಿಣಾಮವೇನು.? ಎಷ್ಟು ಹಾನಿ? ಎಷ್ಟು ವಿಮಾನಗಳು ರದ್ದಾಗಿವೆ?

07/03/2026 9:45 PM
State News
KARNATAKA

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

By kannadanewsnow0907/03/2026 11:03 PM KARNATAKA 1 Min Read

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರವನ್ನು ಸುಂದರ ಮತ್ತು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ಗೌರವಿಸಲು ವಿಶೇಷ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.…

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM

ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ

07/03/2026 8:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.