ಬೆಂಗಳೂರು: ಬೆಳೆಹಾನಿಗೊಳಗಾದ ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಐದು ವರ್ಷದ ಬಳಿಕ ಪರಿಹಾರಧನ ಪರಿಷ್ಕರಣೆ ಮಾಡಲಿದ್ದು, ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರ ಭರಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಅಂದಾಜು 5.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿರುವ ಅಂದಾಜಿದ್ದು, ಎಸ್.ಡಿ.ಆರ್.ಎಫ್. ಮಾರ್ಗಸೂಚಿಯ ಪ್ರಕಾರ ನೀಡುವ ಪರಿಹಾರ ಏನೇನೂ ಸಾಲದು ಎನ್ನುವ ಅಭಿಪ್ರಾಯದ ಹಿನ್ನೆಲೆಯಲ್ಲಿ ಐದು ವರ್ಷದ ನಂತರ ಬೆಳೆ ನಷ್ಟ ಪರಿಹಾರ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಮೊತ್ತ ಹೆಚ್ಚಳ ಮಾಡಲಾಗಿತ್ತು.
ಮಳೆಯಿಂದಾಗಿ 683 ಕಿಮೀ ರಾಜ್ಯ ಹೆದ್ದಾರಿ, 1383 ಜಿಲ್ಲಾ ಪ್ರಮುಖ ಹೆದ್ದಾರಿ, 5558 ಗ್ರಾಮೀಣ ರಸ್ತೆಗಳು, 656 ಸೇತುವೆ/ಕಲ್ವರ್ಟ್ಗಳು, 1877ಶಾಲಾ ಕಟ್ಟಡಗಳು, 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1018 ಅಂಗನವಾಡಿಗಳು, 25279 ವಿದ್ಯುತ್ ಕಂಬಗಳು, 819 ಟ್ರಾನ್ಸ್ಫಾರ್ಮರ್ಗಳು, 31 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ ಸಂಭವಿಸಿದೆ ಎಂದರು.
ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, 480256 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 40407 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು 520663 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಮಳೆಗೆ ಸಂಬಂಧಿಸಿದಂತೆ ಎಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 111 ಮಂದಿ ಸಾವನ್ನಪ್ಪಿದ್ದು ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು, ಒಟ್ಟು 5.55ಕೋಟಿ ಪರಿಹಾರ ನೀಡಲಾಗಿದೆ ಎಂದರು.
651ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9087 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ 8608 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆಯನ್ನು ಸಹ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಮಳೆಯಿಂದಾಗಿ 683 ಕಿಮೀ ರಾಜ್ಯ ಹೆದ್ದಾರಿ, 1383 ಜಿಲ್ಲಾ ಪ್ರಮುಖ ಹೆದ್ದಾರಿ, 5558 ಗ್ರಾಮೀಣ ರಸ್ತೆಗಳು, 656 ಸೇತುವೆ/ಕಲ್ವರ್ಟ್ಗಳು, 1877ಶಾಲಾ ಕಟ್ಟಡಗಳು, 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1018 ಅಂಗನವಾಡಿಗಳು, 25279 ವಿದ್ಯುತ್ ಕಂಬಗಳು, 819 ಟ್ರಾನ್ಸ್ಫಾರ್ಮರ್ಗಳು, 31 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ ಸಂಭವಿಸಿದೆ ಎಂದರು.
ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ತೆಗೆದುಕೊಂಡಿರುವ ಕ್ರಮಗಳ ಕುರಿತು ರಾಜ್ಯದ ಎಲ್ಲಾ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದ ಮುಖ್ಯಾಂಶಗಳನ್ನು ಮುಖ್ಯಮಂತ್ರಿ @siddaramaiah ಅವರು ಮಾಧ್ಯಮಕ್ಕೆ ವಿವರಿಸಿದರು. pic.twitter.com/TRFat0vsG2
— CM of Karnataka (@CMofKarnataka) September 8, 2025