ಬೆಂಗಳೂರು : ರಾಜ್ಯ ಸರ್ಕಾರವು ಗ್ರಂಥಾಲಯದ ಮೇಲ್ವಿಚಾರಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕನಿಷ್ಠ ವೇತನ ನಿಗದಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ರಾಜ್ಯದ ಎಲ್ಲಾ 6,000ಕ್ಕೂ ಅಧಿಕ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರ ರಾಜ್ಯದ ಎಲ್ಲಾ 6,000ಕ್ಕೂ ಅಧಿಕ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ.
ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಈ ಉದ್ದೇಶದಿಂದ ಗ್ರಾಮಗಳಲ್ಲಿ 6,599 ನೂತನ ಗ್ರಾಮಮಟ್ಟದ ಗ್ರಂಥಾಲಯಗಳನ್ಮು ಸ್ಥಾಪನೆ ಮಾಡುತ್ತೇವೆ. #ಗ್ರಂಥಾಲಯ pic.twitter.com/DPBeTUxTGs— Siddaramaiah (@siddaramaiah) August 12, 2024
ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಈ ಉದ್ದೇಶದಿಂದ ಗ್ರಾಮಗಳಲ್ಲಿ 6,599 ನೂತನ ಗ್ರಾಮಮಟ್ಟದ ಗ್ರಂಥಾಲಯಗಳನ್ಮು ಸ್ಥಾಪನೆ ಮಾಡುತ್ತೇವೆ ಎಂದು ಹೇಳಿದ್ದಾರೆ.